BR Patil: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಗ್ ಶಾಕ್ – ಪ್ರಬಲ ಶಾಸಕ ಬಿ ಆರ್ ಪಾಟೀಲ್ ರಾಜೀನಾಮೆ!!

B R Patil: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಆಘಾತ ಎದುರಾಗಿದ್ದು ಕಾಂಗ್ರೆಸ್ನ ಪ್ರಬಲ ಶಾಸಕ ಬಿ ಆರ್ ಪಾಟೀಲ್ ಅವರು ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ.

ಹಿರಿಯ ಶಾಸಕರಿಗೆ ಸರ್ಕಾರದಲ್ಲಿ ಯಾವುದೇ ಸ್ಥಾನಮಾನ ನೀಡದ ಕಾರಣ ಹಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರಿಗೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿತ್ತು, ಇದರ ಜತೆಗೆ ಶಾಸಕ ಬಿಆರ್ ಪಾಟೀಲ್​ ಅವರನ್ನು ಸಿಎಂ ರಾಜಕೀಯ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿತ್ತು. ಆದರೀಗ ಅಚ್ಚರಿ ಎಂಬಂತೆ ಬಿ ಆರ್ ಪಾಟೀಲ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 

ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪತ್ರವನ್ನು ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರವಾನಿಸಿದ್ದಾರೆ. ಆದ್ರೆ, ಬಿಆರ್ ಪಾಟೀಲ್ ಅವರ ದಿಧೀರ್ ನಿರ್ಧಾರ ಅಚ್ಚರಿಗೆ ಕಾರಣವಾಗಿದೆ. ಏಕಾಏಕಿ ರಾಜೀನಾಮೆ ಏಕೆ ನೀಡಿದ್ದಾರೆ ಎನ್ನುವ ಚರ್ಚೆಗೆ ಗ್ರಾಸವಾಗಿದೆ.

Comments are closed.