Kotekar Bank Robbery: ಕೋಟೆಕಾರು ಬ್ಯಾಂಕ್ ದರೋಡೆ ; ಮತ್ತೊಬ್ಬ ಆರೋಪಿಗೆ ಗುಂಡೇಟು

Share the Article

Kotekar Bank Robbery: ಮಂಗಳೂರಿನ ಕೋಟೆಕಾರು ಬ್ಯಾಂಕ್ ದರೋಡೆ (Kotekar Bank Robbery) ಪ್ರಕರಣದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಮೇಲೆ ಪೊಲೀಸರು ಶೂಟೌಟ್ ಮಾಡಿದ್ದಾರೆ. ಕರ್ನಾಟಕ- ಕೇರಳ ಗಡಿಭಾಗದ ಅಜ್ಜಿನಡ್ಕ ಎಂಬಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾಗ ಆರೋಪಿ ಮುರುಗನ್ ಡಿ ದೇವರ್ ಕಾಲಿಗೆ ಗುಂಡು ಹಾರಿಸಿದ್ದಾರೆ.

ದರೋಡೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮುರುಗನ್ ದೇವರ್ ಮತ್ತು ಯೋಶುವಾ ರಾಜೇಂದ್ರನ್ ಅವರನ್ನು ತಮಿಳುನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಲಾಗಿತ್ತು. ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಪೊಲೀಸರು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದರು. ಇಂದು ಮಧ್ಯಾಹ್ನ ಸ್ಥಳ ಮಹಜರು ಉದ್ದೇಶಕ್ಕಾಗಿ ಕರೆದೊಯ್ದಿದ್ದಾಗ ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ, ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ಫೈರಿಂಗ್ ಮಾಡಿದ್ದು ಕಾಲಿಗೆ ಗುಂಡೇಟು ಬಿದ್ದಿದೆ. ಸದ್ಯ ಗಾಯಾಳು ಆರೋಪಿಯನ್ನು ದೇರಳಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಯಲ್ಲಿ ಪೊಲೀಸ್ ಸಿಬ್ಬಂದಿ ಮಂಜುನಾಥ್ ಎಂಬವರಿಗೆ ಗಾಯವಾಗಿದೆ. ಮಂಜುನಾಥ್ ಮೇಲೆ ಹಲ್ಲೆ ನಡೆಸಿ ಮುರುಗನ್ ಪರಾರಿಯಾಗಲು ಯತ್ನಿಸಿದ್ದಾಗಿ ಫೈರಿಂಗ್ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Comments are closed.