Snehamayi Krishna: ಪ್ರಾಣಿಬಲಿ ನೀಡಿ ಫೋಟೋಗೆ ರಕ್ತ ಅಭಿಷೇಕ – ಸ್ನೇಹಮಯಿ ಕೃಷ್ಣ ಹೇಳಿದ್ದೇನು?

Share the Article

Snehamayi Krishna: ಮಂಗಳೂರಿನ ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿದ ಕೇಸ್ ನಲ್ಲಿ ಬಂಧಿಸಲ್ಪಟ್ಟಿದ್ದ ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ಮೊಬೈಲ್ ನಲ್ಲಿ ಸ್ನೇಹಮಯಿ ಕೃಷ್ಣ (Snehamayi Krishna) ಹಾಗೂ ಗಂಗರಾಜು ಅವರ ಫೋಟೋಗಳಿಗೆ ರಕ್ತಾಭಿಷೇಕ ಮಾಡಿದ ಫೋಟೋಗಳು ಪತ್ತೆಯಾಗಿ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಹೌದು, ಪ್ರಸಾದ್ ಅತ್ತಾವರ ಅವರ ಮೊಬೈಲಿನಲ್ಲಿ ಈ ಎಲ್ಲ ವಿಚಾರಗಳು ಬಯಲಾಗುತ್ತಿದ್ದಂತೆ ಇಷ್ಟೆಲ್ಲ ಬೆಳವಣಿಗೆ ಮಧ್ಯೆ ಮೈಸೂರಿನಲ್ಲಿ ಈ ಪ್ರಕರಣದ ಕುರಿತು ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಇದರ ಕುರಿತು ಮಾತನಾಡಿದ ಅವರು ನನ್ನನ್ನು ವಶಪಡಿಸಿಕೊಳ್ಳಲು ಈ ರೀತಿ ಮಾಡಿರಬಹುದು ಎಂದ್ದು ಅಚ್ಚರಿಯ ಉತ್ತರ ನೀಡಿದ್ದಾರೆ.

Comments are closed.