Puttur: ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಈಶ್ವರ ಭಟ್ ಅವಿರೋಧ ಆಯ್ಕೆ

Puttur: ಬನ್ನೂರು ರೈತರ ಸೇವಾ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಗೆ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ನಿಕಟಪೂರ್ವ ಅಧ್ಯಕ್ಷ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‌ರವರು ಸತತ ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ನಿರಂಜನ ರೈ ಮಠಂತಬೆಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸುಭಾಷ್ ನಾಯಕ್ ಅಶ್ರಫ್ ಕಲ್ವೇಗ, ಪಂಜಿಗುಡ್ಡೆ ಈಶ್ವರ ಭಟ್ ನಿರಂಜನ ರೈ ಮಠಂತಬೆಟ್ಟು ಜಯಲಕ್ಷ್ಮಿ ಸುರೇಶ್, ಸುಬ್ರಹ್ಮಣ್ಯ ಗೌಡ ಹನಿಯೂರು, ಶ್ರೀನಿವಾಸ್, ಶಶಿಕಲಾ ಶೆಟ್ಟಿ, ನ್ಯಾಯವಾದಿದೇವಾನಂದ, ಮೋಹನ್ ಪಕ್ಕಳ ಕುಂಡಾಪು, ರಾಜು, ಪೂವಪ್ಪಗೌಡ ಇತರ ನಿರ್ದೇಶಕರು ಬೊಳುವಾರುನಲ್ಲಿರುವ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ನಡೆಯಿತು.
ರಿಟರ್ನಿಂಗ್ ಅಧಿಕಾರಿಯಾಗಿ ಶೋಭಾ ಎನ್ ಎಸ್ ರವರು ಚುನಾವಣಾ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.
ಅಧ್ಯಕ್ಷತೆಗೆ ಪಂಜಿಗುಡ್ಡೆ ಈಶ್ವರ ಭಟ್ ಹಾಗೂ ಉಪಾಧ್ಯಕ್ಷತೆಗೆ ನಿರಂಜನ ರೈ ಮಠಂತಬೆಟ್ಟುರವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಗೊಂಡರು. ನೂತನವಾಗಿ ಆಯ್ಕೆಗೊಂಡ ಎಲ್ಲಾ 12 ಮಂದಿ ನಿರ್ದೇಶಕರುಗಳಿಗೆ ಚುನಾವಣಾಧಿಕಾರಿ ಪ್ರಮಾಣ ಪತ್ರವನ್ನು ವಿತರಿಸಿದ ಬಳಿಕ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯನ್ನು ಘೋಷಿಸಿದರು.
ಸನ್ಮಾನ : ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಚುನಾವಣೆ ಪ್ರಕ್ರಿಯೆಯನ್ನು ಉತ್ತಮ ರೀತಿಯಲ್ಲಿ ನಡೆಸಿಕೊಟ್ಟ ಚುನಾವಣಾ ರಿಟರ್ನಿಂಗ್ ಅಧಿಕಾರಿ ಶೋಭಾ ಎನ್.ಎಸ್. ಹಾಗೂ ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ ಆಯ್ಕೆಗೊಂಡದ.ಕ. ಜಿಲ್ಲಾಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
Comments are closed.