Gold Price : ಬಜೆಟ್ ಮಂಡನೆ ಬಳಿಕ ಚಿನ್ನದ ಬೆಲೆಯಲ್ಲಿ ಮಹತ್ವದ ಬದಲಾವಣೆ !!

Gold Price : ಕೇಂದ್ರ ಬಜೆಟ್ ಮಂಡನೆಯಲ್ಲಿ ಚಿನ್ನದ ಬೆಲೆ ಕಡಿಮೆ ಮಾಡಲು ಸರ್ಕಾರ ಕ್ರಮ ತೆಗೆದುಕೊಳ್ಳುವ ನಿರೀಕ್ಷೆ ಇತ್ತಾದರೂ ಅದು ಸುಳ್ಳಾಗಿದ್ದು ಬಜೆಟ್ ದಿನ ಚಿನ್ನದ ಬೆಲೆ ಮತ್ತಷ್ಟು ಏರಿಕೆಯಾಗುವ ಮೂಲಕ ಶಾಕ್ ಕೊಟ್ಟಿದೆ.
ಹೌದು, ಶನಿವಾರ ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 84,490 ರೂಪಾಯಿ ತಲುಪಿದ್ದು ಇದು ಸಾರ್ವಕಾಲಿಕ ಗರಿಷ್ಠ ಬೆಲೆಯಾಗಿದೆ. ಶುಕ್ರವಾರ 84,490 ರೂಪಾಯಿ ಇದ್ದ 10 ಗ್ರಾಂ ಶುದ್ಧ ಚಿನ್ನದ ಬೆಲೆ ಶನಿವಾರ 160 ರೂಪಾಯಿ ಏರಿಕೆ ಕಂಡಿದ್ದು 84,490 ರೂಪಾಯಿಯಲ್ಲಿ ವಹಿವಾಟು ನಡೆಸಿತು.
ಇನ್ನು 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಗ್ರಾಂಗೆ 16 ರೂಪಾಯಿ ಏರಿಕೆ ಕಂಡಿದೆ. ಶುಕ್ರವಾರ 8433 ರೂಪಾಯಿ ಇದ್ದ 1 ಗ್ರಾಂ 24 ಕ್ಯಾರಟ್ ಚಿನ್ನದ ಬೆಲೆ ಶನಿವಾರ 8449 ರೂಪಾಯಿಗೆ ಏರಿಕೆಯಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ ಗ್ರಾಂಗೆ 12 ರೂಪಾಯಿ ಏರಿಕೆಯಾಗಿದೆ. ಶುಕ್ರವಾರ 6325 ರೂಪಾಯಿ ಇದ್ದ ಒಂದು ಗ್ರಾಂ 18 ಕ್ಯಾರಟ್ ಚಿನ್ನದ ಬೆಲೆ ಶನಿವಾರ 6337 ರೂಪಾಯಿಗೆ ಏರಿಕೆಯಾಗಿದೆ. 10 ಗ್ರಾಂ 18 ಕ್ಯಾರಟ್ ಚಿನ್ನದ ಬೆಲೆ ಶುಕ್ರವಾರ 63,250 ಇದ್ದರೆ ಶನಿವಾರ 120 ರೂಪಾಯಿ ಏರಿಕೆ ಕಂಡು 63,370 ರೂಪಾಯಿಯಲ್ಲಿ ವಹಿವಾಟು ನಡೆಸಿದೆ.
Comments are closed.