Bank Jobs: ಸೆಂಟ್ರಲ್‌ ಬ್ಯಾಂಕ್‌ನಿಂದ 1000 ಹುದ್ದೆಗಳಿಗೆ ಅರ್ಜಿ ಆಹ್ವಾನ

Central Bank Of India: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ 1000 ಕ್ರೆಡಿಟ್‌ ಆಫೀಸರ್‌ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆನ್‌ಲೈನ್‌ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಫೆ.20 ರ ಗಡುವು ನೀಡಲಾಗಿದೆ.

ಹುದ್ದೆಗಳ ಸಂಖ್ಯೆ: ಒಟ್ಟು 1000 ಹುದ್ದೆಗಳ ಪೈಕಿ ಎಸ್‌ಸಿ ಅಭ್ಯರ್ಥಿಗಳಿಗೆ 150, ಎಸ್‌ಟಿ ವರ್ಗದವರಿಗೆ 75, ಒಬಿಸಿ ಅಭ್ಯರ್ಥಿಗಳಿಗೆ 270, ಆರ್ಥಿಕ ದುರ್ಬಲ ವರ್ಗದವರಿಗೆ 100 ಹಾಗೂ ಸಾಮಾನ್ಯ ವರ್ಗದವರಿಗೆ 405 ಹುದ್ದೆಗಳನ್ನು ಮೀಸಲಿಡಲಾಗಿದೆ.

ವಿದ್ಯಾರ್ಹತೆ: ಪದವೀಧರರು ಅರ್ಜಿ ಸಲ್ಲಿಸಬಹುದು. ನಿಗದಿತ ವಿದ್ಯಾರ್ಹತೆಯಲ್ಲಿ ಕನಿಷ್ಠ ಶೇ.60 ಅಥವಾ ಅದಕ್ಕಿಂತ ಹೆಚ್ಚು ಅಂಕ ಪಡೆದು ತೇರ್ಗಡೆಯಾಗಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ಎಸ್‌ಸಿ/ಎಸ್‌ಟಿ/ಒಬಿಸಿ ಮತ್ತು ವಿಶೇಷಚೇತನ ಅಭ್ಯರ್ಥಿಗಳಾಗಿದ್ದಲ್ಲಿ ಕನಿಷ್ಠ ಶೇ.55 ಅಂಕ ಪಡೆದಿದ್ದರೂ ಅರ್ಜಿ ಸಲ್ಲಿಸಬಹುದು.

ವಯೋಮಿತಿ: 20 ವರ್ಷದಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೀಸಲು ವ್ಯಾಪ್ತಿಗೆ ಒಳಪಡುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು https://www.centralbankofindia.co.in/en/recruitments ಈ ಲಿಂಕ್‌ ಕ್ಲಿಕ್‌ ಮಾಡಿ.

Comments are closed.