DL: ಜಸ್ಟ್ ಈ ಒಂದು ತಪ್ಪು ಮಾಡಿದ್ರೆ ಸಾಕು, ಇನ್ಮುಂದೆ ಡ್ರೈವಿಂಗ್ ಲೈಸೆನ್ಸ್ ರದ್ದು!!

DL: ಪೊಲೀಸ್ ಇಲಾಖೆಯು ವಾಹನ ಸವಾರರಿಗೆ ಹೊಸ ನಿಯಮವನ್ನು ಜಾರಿ ಮಾಡಿದ್ದು ಇನ್ನು ಮುಂದೆ ಜಸ್ಟ್ ಇದೊಂದು ತಪ್ಪು ಮಾಡಿದರೆ ಸಾಕು ಡ್ರೈವಿಂಗ್ ಲೈಸೆನ್ಸ್ ಅನ್ನು ರದ್ದು ಮಾಡುವ ಪ್ರಕಟಣೆಯನ್ನು ಹೊರಡಿಸಿದೆ.
ಹೌದು, ಪಾದಚಾರಿ ಮಾರ್ಗದ ಮೇಲೆ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಗರದ ಸಂಚಾರಿ ಪೊಲೀಸರು ಮುಂದಾಗಿದ್ದಾರೆ. ಹೀಗೆ ಮಾಡಿದವರ ವಾಹನ ಪರವಾನಗಿಯನ್ನು (ಡಿಎಲ್) ರದ್ದು ಮಾಡಲು ನಿರ್ಧಾರ ಕೈಗೊಂಡಿದ್ದಾರೆ.
ಅಂದಹಾಗೆ ಮೊದಲ ಬಾರಿಗೆ ಸಿಕ್ಕಿಬಿದ್ದರೆ ದಂಡ ಹಾಕಲಾಗುತ್ತದೆ. ಮತ್ತೆ ಮತ್ತೆ ಸಿಕ್ಕಿಬಿದ್ದರೇ ಲೈಸೆನ್ಸ್ ಅಮಾನತು ಮಾಡುವಂತೆ ಸಂಚಾರಿ ಪೊಲೀಸರು ಶಿಪಾರಸ್ಸು ಮಾಡಲಿದ್ದಾರೆ.
Comments are closed.