Lucknow: ನಾದಿನಿ ಮೇಲೆ ಅತ್ಯಾಚಾರ, ಕೊಲೆ ಮಾಡಲು ಭಾವನ ಸುಪಾರಿ

Lucknow: ಭಾವನೇ ಸುಪಾರಿ ಕೊಟ್ಟು ನಾದಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿಸಿ, ಕೊಲೆ ಮಾಡಿರುವ ಭೀಕರ ಘಟನೆಯೊಂದು ಉತ್ತರ ಪ್ರದೇಶದ ಮುಜಫರ್‌ ನಗರ ಗ್ರಾಮೀಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆ ಜ.21 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ ಇಬ್ಬರು ಸುಪಾರಿ ಹಂತಕರ ಜೊತೆ ಸೇರಿಕೊಂಡು ಭಾವನೇ ನಾದಿನಿಯ ಮೇಲೆ ಅತ್ಯಾಚಾರ ಎಸಗಿದ್ದು, ನಂತರ ಕೊಲೆ ಮಾಡಿದ್ದಾನೆ. ಸಾಕ್ಷ್ಯ ನಾಶಗೊಳಿಸಲು ಮೃತದೇಹಕ್ಕೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾನೆ ಎಂದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಹಂತಕರಾದ ಶುಭಂ ಮತ್ತು ದೀಪಕ್‌ ಅವರು ತಲೆಮರೆಸಿಕೊಂಡಿದ್ದಾರೆ.

ಪತ್ನಿಯ ಸೋದರಿ ಜೊತೆ ಸಂಬಂಧ ಹೊಂದಿದ್ದೆ. ಇತ್ತೀಚೆಗೆ ಆಕೆ ನನಗೆ ಬ್ಲಾಕ್‌ಮೇಲ್‌ ಮಾಡುತ್ತಿದ್ದಳು. ಗುಟ್ಟು ರಟ್ಟಾಗುವ ಭಯದಿಂದ ಹತ್ಯೆಗೆ ಸಂಚು ರೂಪಿಸಿದೆ ಎಂದು ಪೊಲೀಸ್‌ ವಿಚಾರಣೆ ಸಂದರ್ಭ ಆರೋಪಿ ಆಶಿಶ್‌ ತಪ್ಪೊಪ್ಪಿಕೊಂಡಿದ್ದಾನೆ. ʼನಾದಿನಿ ಹತ್ಯೆ ಮಾಡಲು ಬ್ಯಾಂಕ್‌ವೊಂದರಿಂದ 40 ಸಾವಿರ ರೂ. ಸಾಲ ಪಡೆದುಕೊಂಡಿದ್ದೆ. ಸುಪಾರಿ ಹಂತಕರಿಗೆ 10 ಸಾವಿರ ರೂ. ಮುಂಗಡ ಹಣ ನೀಡಿದ್ದೆ. ಹತ್ಯೆ ನಂತರ 20 ಸಾವಿರ ರೂ.ಗಳನ್ನು ನೀಡಿದ್ದೆ ಎಂದು ಆಶಿಶ್‌ ಹೇಳಿದ್ದಾನೆ.

“ಜ.21 ರಂದು ಮಹಿಳೆಯನ್ನು ನಿರ್ಜನ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದು, ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ನಂತರ ಕತ್ತು ಹಿಸುಕಿ ಕೊಲೆ ಮಾಡಿ, ಸಾಕ್ಷ್ಯ ನಾಶ ಮಾಡಲು ಮೃತದೇಹವನ್ನು ಸುಟ್ಟು ಹಾಕಿದ್ದಾರೆʼ ಎಂದು ಪೊಲೀಸರು ತಿಳಿಸಿದ್ದಾರೆ.

Comments are closed.