Chikkamagaluru: ಚಿಕ್ಕಮಗಳೂರಿನಲ್ಲಿ ಕಾಡುತ್ತಿರುವ ಮಂಗನ ಕಾಯಿಲೆಯ ಭೀತಿ!

Chikkamagaluru: ಚಿಕ್ಕಮಗಳೂರಿನಲ್ಲಿ (Chikkamagaluru) ಮಂಗನ ಕಾಯಿಲೆಯ ಭೀತಿ ಹೆಚ್ಚಾಗಿದ್ದು ದಿನೇ ದಿನೇ ಆತಂಕ ಸೃಷ್ಟಿಸುವಂತೆ ಮಾಡಿದೆ. ಈಗಾಗಲೇ 7 ಜನರಲ್ಲಿ ಸೋಂಕು ಪತ್ತೆಯಾಗಿದ್ದು ಗ್ರಾಮಗಳಲ್ಲಿ ಭೀತಿ ಹುಟ್ಟಿಸಿದೆ.

ಕಳೆದ ವರ್ಷ ಚಿಕ್ಕಮಗಳೂರು ಜಿಲ್ಲೆಯಲ್ಲಿ 132 ಜನರಲ್ಲಿ ಕೆಎಫ್‌ಡಿ ಕಾಣಿಸಿಕೊಂಡು ನಾಲ್ವರು ಮೃತಪಟ್ಟಿದ್ದರು. ಈ ವರ್ಷ ಕೆಎಫ್‌ಡಿ ಖಾಯಿಲೆ ತೀವ್ರವಾಗುವ ಮುನ್ನವೇ ಎಚ್ಚರ ವಹಿಸಲಾಗಿದೆ.

ಈ ವರ್ಷ ಮೊದಲು ಖಾಂಡ್ಯ ಹೋಬಳಿಯ ಮತ್ತಿಖಂಡ ಗ್ರಾಮದ 25 ವರ್ಷದ ಯುವಕನಲ್ಲಿ ಮೊದಲು ಕೆಎಫ್‌ಡಿ ಕಾಣಿಸಿಕೊಂಡಿತ್ತು. ಇದೀಗ 7 ಜನರಲ್ಲಿ ಈ ಕಾಯಿಲೆ ಕಾಣಸಿಕೊಂದೆ. ಈ ಬಗ್ಗೆ ಎಚ್ಚರ ವಹಿಸಿದ ಆರೋಗ್ಯ ಇಲಾಖೆ, ಕಾಡಂಚಿನ ತಾಲೂಕುಗಳಾದ ಚಿಕ್ಕಮಗಳೂರು, ಕೊಪ್ಪ, ಎನ್.ಆ‌ರ್.ಪುರ, ಶೃಂಗೇರಿಗಳಲ್ಲಿ ಅಲರ್ಟ್‌ ಘೋಷಣೆ ಮಾಡಿದೆ. ಗ್ರಾಮದಲ್ಲಿ ಮನೆ ಮನೆಗಳಿಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದು, ಅರಣ್ಯಗಳಿಗೆ ತೆರಳದಂತೆ ಸೂಚಿಸಿದೆ.

Comments are closed.