SSLC: ಈ ಬಾರಿ SSLC ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಗ್ರೇಸ್ ಅಂಕ ಕೊಡುವುದಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Share the Article

SSLC: ಶಿಕ್ಷಣ ಸಚಿವ ಮಧು ಬಂಗಾರಪ್ಪ ಫೆಬ್ರವರಿ 3ರಂದು ಬನಶಂಕರಿಯ ಡಿಸಿಇಆರ್ ಟಿಯಲ್ಲಿ ಮಕ್ಕಳ ಜೊತೆ ಹಾಗೂ ಶಿಕ್ಷಕರು ಜೊತೆ ಸಂವಾದ ನಡೆಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಬಾರಿ SSLC ಪರೀಕ್ಷೆಯಲ್ಲಿ ಯಾವುದೇ ಕಾರಣಕ್ಕೂ ಗ್ರೇಸ್ ಮಾರ್ಕ್ಸ್ ಕೊಡುವುದಿಲ್ಲ ಎಂದು ಘೋಷಿಸಿದ್ದಾರೆ. ಹೌದು, ಶಾಲಾ ಶಿಕ್ಷಣ ಇಲಾಖೆಯು ಎಸ್‌ಎಸ್‌ಎಲ್ಸಿ ಮುಖ್ಯ ಪರೀಕ್ಷೆಗೆ ಮತಷ್ಟು ಕಠಿಣ ರೂಲ್ಸ್ ತರಲು ಮುಂದಾಗಿದ್ದು ಈ ನಿಟ್ಟಿನಲ್ಲಿ ಕಠಿಣ ನಿಯಮ ಮಾಡಲಾಗಿದೆ.

ಕಳೆದ ವರ್ಷ SSLC ಎಕ್ಸಾಂನಲ್ಲಿ ಹೆಚ್ಚುವರಿ ಗ್ರೇಸ್ ಮಾರ್ಕ್ಸ್ ಕೊಟ್ಟು ವಿವಾದಕ್ಕೀಡಾಗಿದ್ದ ಶಿಕ್ಷಣ ಇಲಾಖೆ, ಈ ವರ್ಷ ಹೆಚ್ಚುವರಿ ಮಾರ್ಕ್ಸ್ ರದ್ದು ಮಾಡಿದೆ. ಫಲಿತಾಂಶ ವೃದ್ಧಿಗಾಗಿ ನಾನಾ ಕ್ರಮಗಳನ್ನು ಕೈಗೊಂಡಿದ್ದು ಇದರ ಭಾಗವಾಗಿ ಮಕ್ಕಳಿಗೆ ಬೆಳಗ್ಗೆ ಫೋನ್ ಮಾಡಿ ಎಬ್ಬಿಸಿ ಓದಿಸುವ ಕಾರ್ಯಕ್ರಮ, ವಿಶೇಷ ತರಗತಿಗಳನ್ನ ಮಾಡುವ ಮೂಲಕ ಅಭ್ಯಾಸ ಮಾಡುವ ಕಾರ್ಯಕ್ರಮ, ಕಿರು ಪರೀಕ್ಷೆಗಳು, ಪೂರ್ವ ಸಿದ್ಧತಾ ಪರೀಕ್ಷೆಗಳು ಮಾಡುವ ಕೆಲಸ ಮಾಡಿದ್ದಾರೆ. ಸಿಇಒಗಳೇ ಪ್ರಶ್ನೆ ಪತ್ರಿಕೆ ಸಿದ್ಧ ಮಾಡಿ ಪರೀಕ್ಷೆ ಮಾಡಿದ್ದು 2-3 ಶಾಲೆಗಳಿಗೆ ಒಬ್ಬ ಅಧಿಕಾರಿಗಳ ನೇತೃತ್ವಗಳನ್ನ ನೇಮಕ ಮಾಡಿ ಕಲಿಕೆ ಅಭಿವೃದ್ಧಿ ಮಾಡುವ ಕೆಲಸ ಮಾಡಿದ್ದೇವೆ ಎಂದು ಶಿಕ್ಷಣ ಸಚಿವರು ಮಾಹಿತಿ ನೀಡಿದರು.

Comments are closed.