Yakshadhruva Patla Foundation: ಯಕ್ಷಧ್ರುವ ಪಟ್ಲ ಫೌಂಡೇಶನ್‌ಗೆ ಅಮೆರಿಕ ಉದ್ಯಮಿಯಿಂದ 1.25 ಕೋಟಿ ದೇಣಿಗೆ

Yakshadhruva Patla Foundation: ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದ ಪರಮಭಕ್ತರು, ಪಟ್ಲ ಸತೀಶ್ ಶೆಟ್ಟಿ ಅವರ ನೆಚ್ಚಿನ ಅಭಿಮಾನಿ ಆಗಿರುವ ಶ್ರೀ ಶಾರದಾ ಪ್ರಸಾದ್ ಹಾಗೂ ಅವರ ಪತ್ನಿ ಶ್ರೀಮತಿ ನಳಿನಿ ಪ್ರಸಾದ್ ಅವರು, ಪಟ್ಲ ಸತೀಶ್ ಶೆಟ್ಟಿ ಅವರ ಗೃಹ ಪ್ರವೇಶಕ್ಕೆ ಆಗಮಿಸಿ, ಅವರು ಮಾಡುವ ಉತ್ತಮ ಕಾರ್ಯಗಳನ್ನು ಮೆಚ್ಚಿದ್ದು, ಇದೇ ವೇಳೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ಗೆ (Yakshadhruva Patla Foundation Trust) 1.25 ಕೋಟಿ ರೂ. ದೇಣಿಗೆಯನ್ನು ನೀಡಿ ಆಶೀರ್ವದಿಸಿದರು.
ಅಲ್ಲದೇ ಸಂಜೆ ನಡೆದ ಪಾವಂಜೆ ಮೇಳದ ಶ್ರೀ ದೇವಿಮಹಾತ್ಮೆ ಯಕ್ಷಗಾನದ ಸಂದರ್ಭದಲ್ಲಿ ಶ್ರೀ ಶಾರದಾಪ್ರಸಾದ್ ಹಾಗೂ ಶ್ರೀಮತಿ ನಳಿನಿ ಶಾರದಾ ಪ್ರಸಾದ್ ದಂಪತಿಗಳನ್ನು ಗೌರವಿಸಲಾಯಿತು.
Comments are closed.