Darshan: ಪ್ರಾದೇಶಿಕ ಪಕ್ಷ ಕಟ್ಟಿ ನಟ ದರ್ಶನ್ ರಾಜಕೀಯಕ್ಕೆ ಎಂಟ್ರಿ ?!

Darshan: ಕನ್ನದ ಖ್ಯಾತ ನಟ ದರ್ಶನ್ ಅವರು ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಡಿ ಜಾಮೀನು ಪಡೆದು ಇತ್ತೀಚಿಗಷ್ಟೇ ಜೈಲಿನಿಂದ ಹೊರ ಬಂದಿದ್ದಾರೆ. ಈ ನಡುವೆ ಅವರು ಕೆಲವು ಸಿನಿಮಾಗಳಿಗೆ ಪಡೆದ ಅಡ್ವಾನ್ಸ್ ಅನ್ನು ಹಿಂದಿರುಗಿಸಿದ್ದಾರೆ ಎಂಬ ಸುದ್ದಿ ಕೂಡ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ದರ್ಶನ್ ಅವರು ಪ್ರಾದೇಶಿಕ ಪಕ್ಷ ಕಟ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎನ್ನುವ ಸುದ್ದಿ ವೈರಲ್ ಆಗಿದೆ.
ಹೌದು, ಇತ್ತೀಚಿಗೆ ತಮಿಳುನಾಡಿನಲ್ಲಿ ಖ್ಯಾತ ನಟ, ಅಪಾರ ಅಭಿಮಾನಿಗಳನ್ನು ಹೊಂದಿರುವ ಸ್ಟಾರ್ ವಿಜಯ್ ದಳಪತಿ ಅವರು ತಮ್ಮದೇ ಆದಂತಹ ಪ್ರಾದೇಶಿಕ ಪಕ್ಷವನ್ನು ಕಟ್ಟಿ ಅದನ್ನು ಲೋಕಾರ್ಪಣೆ ಕೂಡ ಮಾಡಿದರು. ಅಲ್ಲದೆ ಈಗಿಂದಲೇ ಮುಂಬರುವ ವಿಧಾನಸಭಾ ಚುನಾವಣೆಗೆ ತಯಾರಿಯನ್ನು ಕೂಡ ನಡೆಸುತ್ತಿದ್ದಾರೆ. ಅಪಾರ್ ಅಭಿಮಾನಿಗಳನ್ನು ಹೊಂದಿರುವ ನಟರಿಗೆ ಈ ಪಕ್ಷಗಳು ಕೈಹಿಡಿಯುವುದು ಫಿಕ್ಸ್ ಎನ್ನಲಾಗುತ್ತಿದೆ. ಅಂತೆಯೇ ದರ್ಶನವರು ಕೂಡ ಈಗ ಪ್ರಾದೇಶಿಕ ಪಕ್ಷ ಕಟ್ಟಲು ಅಣಿಯಾಗುತ್ತಿದ್ದಾರೆ ಎನ್ನಲಾಗಿದೆ.
ಸಧ್ಯ ಕರ್ನಾಟಕ ಕೇಂದ್ರಿತ ಪ್ರಾದೇಶಿಕ ಪಕ್ಷವನ್ನು ಕಟ್ಟಿ ಚುನಾವಣೆಗೆ ಇಳಿಯುತ್ತಾರೆ ಎಂದು ನಿರೀಕ್ಷೆ ಮಾಡಲಾಗುತ್ತಿದೆ. ಅಪಾರ ಅಭಿಮಾನಿಗಳನ್ನು ಕೂಡ ಹೊಂದಿದ್ದು ರಾಜಕೀಯದಲ್ಲೂ ಯಶಸ್ವಿಯಾಗುತ್ತಾರೆ ಎಂದು ಅಭಿಮಾನಿಗಳು ನಿರೀಕ್ಷೆ ಮಾಡಿದ್ದಾರೆ.
Comments are closed.