ಸಹಕಾರ ರತ್ನ ಸವಣೂರು ಕೆ. ಸೀತಾರಾಮ ರೈ ಯವರಿಗೆ ಸನ್ಮಾನ

ಸವಣೂರು : ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸಹಕಾರ ರತ್ನ ಸವಣೂರು ಕೆ. ಸೀತಾರಾಮ ರೈ ಯವರು ಸತತ 30 ವರ್ಷಗಳಿಂದ ಶ್ರೀರಾಮಕೃಷ್ಣ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ.ಲಿ. ಮಂಗಳೂರು ಇದರ ನಿರ್ದೇಶಕರಾಗಿದ್ದು ಈ ಬಾರಿಯ ಚುನಾವಣೆಯಲ್ಲೂ 5 ವರ್ಷಗಳ ಅವಧಿಗೆ ನಿರ್ದೇಶಕರಾಗಿ ಆಯ್ಕೆಗೊಂಡಿದ್ದಾರೆ.
ಇವರನ್ನು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಸಂಸ್ಥೆಯ ಆಡಳಿತಾಧಿಕಾರಿ ನ್ಯಾಯವಾದಿ ಅಶ್ವಿನ್.ಎಲ್ ಶೆಟ್ಟಿ , ಟ್ರಸ್ಟಿಗಳಾದ ರಶ್ಮಿ ಅಶ್ವಿನ್ ಶೆಟ್ಟಿ, ಪ್ರಾಂಶುಪಾಲರಾದ ಡಾ. ರಾಜಲಕ್ಷ್ಮೀ ಎಸ್ ರೈ, ಉಪಪ್ರಾಂಶುಪಾಲ ಶೇಷಗಿರಿ ಎಂ. ಹಾಗೂ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಸನ್ಮಾನಿಸಿದರು.
Comments are closed.