Supreme Court: ಶವ ಸಂಭೋಗವನ್ನು ಅತ್ಯಾಚಾರವೆಂದು ಪರಿಗಣಿಸಲಾಗದು: ಸುಪ್ರೀಂ ಕೋರ್ಟ್

Share the Article

Supreme Court: ಶವ ಸಂಭೋಗ ನಡೆಸುವ ವಿಕೃತ ನಡವಳಿಕೆಯನ್ನು ಅತ್ಯಾಚಾರವೆಂದು ಪರಿಗಣಿಸುವಂತೆ ಕೋರಿ ಕರ್ನಾಟಕ ಸರಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.

 

ಶವ ಸಂಭೋಗ ಪ್ರಕರಣದಲ್ಲಿ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಗೊಲಗೇನಗಹಳ್ಳಿಯ ಆರೋಪಿಗೆ ಕೆಳ ನ್ಯಾಯಾಲಯ ನೀಡಿದ್ದ ಶಿಕ್ಷೆ ರದ್ದುಗೊಳಿಸಿದ್ದ ಹೈಕೋರ್ಟ್‌ನ ತೀರ್ಪು ಪ್ರಶ್ನಿಸಿ ಕರ್ನಾಟಕ ಸರಕಾರ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕಾನೂನಿನಲ್ಲಿ ಬದಲಾವಣೆ ಮಾಡುವುದು ಸಂಸತ್ತಿಗೆ ಬಿಟ್ಟ ವಿಚಾರ. ಕೇಂದ್ರಕ್ಕೆ ರಾಜ್ಯ ಸರಕಾರ ಪ್ರಸ್ತಾವ ಸಲ್ಲಿಸಬಹುದು ಎಂದು ಹೇಳಿದೆ.

 

“ಮೃತ ವ್ಯಕ್ತಿಯು ಒಪ್ಪಿಗೆ ನೀಡಲು ಸಾಧ್ಯವಿಲ್ಲದ ಕಾರಣ ಶವ ಸಂಭೋಗವನ್ನು ಅತ್ಯಾಚಾರದ ಅಪರಾಧವೆಂದು ಪರಿಗಣಿಸಬೇಕು ಎಂಬ ರಾಜ್ಯದ ವಾದವನ್ನು ನ್ಯಾ. ಸುಧಾಂಶು ಧುಲಿಯಾ ಹಾಗೂ ನ್ಯಾ. ಆಹ್ವಾನುದ್ದೀನ್ ಅಮಾನುಲ್ಲಾ ಪೀಠ ವಜಾಗೊಳಿಸಿಸಿತು.

Comments are closed.