ಫೆ.8;ಸ್ವರ ಸಾನಿಧ್ಯರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ

Mangalore February 8: ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್ ನಲ್ಲಿ ಸ್ವರ ಸಾನಿಧ್ಯ ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ ಹಾಗೂ ದೇಶದ ಖ್ಯಾತ ಸಂಗೀತ ಕಲಾವಿದರ ಸಂಗೀತ ಕಾರ್ಯಕ್ರಮ ಫೆಬ್ರವರಿ 8 ರಂದು ನಡೆಯಲಿದೆ.
ಬೆಳಗ್ಗೆ 8 ಗಂಟೆಗೆ ದೀಪ ಪ್ರಜ್ವಲನದೊಂದಿಗೆ ಕಾರ್ಯಕ್ರಮ ಆರಂಭ ಗೊಳ್ಳಲಿದೆ.ಬೆಳಿಗ್ಗೆ 8.40 ರಿಂದ 9.30 ರವರೆಗೆ,ಶ್ರೀಮತಿ ವಿಭಾ ಎಸ್ ನಾಯಕ್ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ನಡೆಯಲಿದೆ. ತಬಲಾ ದಲ್ಲಿ ವಿಗ್ನೇಶ್ ಪ್ರಭು ಹಾಗೂ ಹಾರ್ಮೋನಿಯಂ ನಲ್ಲಿ ಹೇಮಂತ್ ಭಾಗವತ್ ಸಾಥ್ ನೀಡಲಿದ್ದಾರೆ.ಬೆಳಿಗ್ಗೆ 9.40 ರಿಂದ 10.30 ರವರೆಗೆ ಮೂಡುಬಿದಿರೆಯ ಸ್ವಯಂ ಪ್ರಕಾಶ್ ಪ್ರಭು (ಪಂಡಿತ್ ಹರಿಪ್ರಸಾದ್ ಚೌರಾಸಿಯಾ ಅವರ ಶಿಷ್ಯ) ಅವರಿಂದ ಕೊಳಲು ವಾದನ
ಬೆಳಿಗ್ಗೆ 10.40 ರಿಂದ 11.30 ರವರೆಗೆ ಆತ್ರೇಯಾ ಗಂಗಾಧರ್ ಅವರಿಂದ ಗಾಯನ,ಮಂಗಳೂರಿನ ಸುರತ್ಕಲ್ ಮೂಲದ ಆತ್ರೇಯ ಗಂಗಾಧರ್ ಅವರು ಪುಣೆಯ ಚಿನ್ಮಯ ವಿಶ್ವವಿದ್ಯಾಪೀಠದಲ್ಲಿ ಸಂಗೀತದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರುವಗಾಯಕರಾಗಿದಗದಾರೆ.
ಬೆಳಗ್ಗೆ 11.40 ರಿಂದ ಕಲಾಸಾಧನ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ.ಸಂಜೆ 5.00 ಹಿಂದೂಸ್ತಾನಿ ಸಂಗೀತ ಕಛೇರಿ ಉದ್ಘಾಟನೆ.
ಸಂಜೆ 5.45 ರಿಂದ 7.00 ವರೆಗೆ ಬಸವರಾಜ ವಂದಲಿ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಛೇರಿ.ಬಸವರಾಜ ವಂದಲಿ, ಧಾರವಾಡ ಜಿಲ್ಲೆಯ ಮಾನ್ವಿಯ ಸಂಗೀತಗಾರರು ಮತ್ತು ನಾಟಕಕಾರರ ಕುಟುಂಬದಲ್ಲಿ ಜನಿಸಿದವರು.ತನ್ನ ತಂದೆಯ (ಡಾ. ಪುಟ್ಟರಾಜ ಗವಾಯಿಜಿ ಗದಗನ ಶಿಷ್ಯ) ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದಾರೆ. ಪಂ. ವಿರೂಪಾಕ್ಷಯ್ಯ ವಂದಲಿ ಜಿ ಗ್ವಾಲಿಯರ್ ಮತ್ತು ಕಿರಾಣಾ ಘರಾನಾದ ಶ್ರೀಮಂತ ಸಂಪ್ರದಾಯದಲ್ಲಿ ತರಬೇತಿ ಪಡೆಯುತ್ತಿದ್ದಾರೆ.ಗಮಕ್ ಶೈಲಿಯ ಸಾಧಕ ಟಂಕರಿಯೊಂದಿಗೆ ಪ್ರಸ್ತುತ ಪಡಿಸಲಿದ್ದಾರೆ.
7.15 ರಿಂದ 8.30ವರೆಗೆ ಕೋಲ್ಕತ್ತಾದ ಅರಣ್ಯ ಚೌಧರಿ ಅವರಿಂದ ಸಂತೂರ್ ವಾದನ ಕಛೇರಿ ನಡೆಯಲಿದೆ ಅವರು ಮುಂಬೈ, ಬನಾರಸ್, ದೆಹಲಿ ಹಾಗೂ ಜರ್ಮನಿ, ಫ್ರಾನ್ಸ್, ಪೋಲೆಂಡ್ ಮುಂತಾದ ವಿದೇಶಗಳಲ್ಲಿಯೂ ಪ್ರದರ್ಶನ ನೀಡಿರುವ ಖ್ಯಾತ ಸಂತೂರ್ ವಾದಕರಾಗಿದ್ದಾರೆ ಎಂದು ಕಲಾಸಾಧನ ಸಂಸ್ಥೆ ನಿರ್ದೇಶಕಿ
ವಿಭಾ ಎಸ್ ನಾಯಕ್ ತಿಳಿಸಿದ್ದಾರೆ.
ಮಂಗಳೂರಿನ ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಈ ಸಂಗೀತ ಕಾರ್ಯಕ್ರಮದಕ್ಕೆ ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ.
ಪತ್ರಿಕಾಗೋಷ್ಠಿ ಯಲ್ಲಿ ಸಂಸ್ಥೆಯ ಗೌರವ ಸಲಹೆಗಾರರಾದ ಶ್ರೀನಿವಾಸ್ ನಾಯಕ್ ಇಂದಾಜೆ, ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್ ಪ್ರಿನ್ಸಿಪಾಲ್ ಡಾ ಮಾಲಿನಿ ಹೆಬ್ಬಾರ್ ಉಪಸ್ಥಿತರಿದ್ದರು.
Comments are closed.