of your HTML document.

Shiradi : ಕಾರು-ದ್ವಿಚಕ್ರ ವಾಹನ ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ನಳಿನ್ ಕುಮಾರ್

Nelyadi : ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ಶಿರಾಡಿಯಲ್ಲಿ ನಡೆದಿದ್ದು, ಮಾಜಿ ಸಂಸದ ನಳಿನ್ ಕುಮಾ‌ರ್ ಕಟೀಲ್ ಅವರು ತನ್ನ ಬೆಂಗಾವಲು ವಾಹನದಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದರು.

ಬೆಂಗಳೂರಿನಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಶಿರಾಡಿಯಲ್ಲಿ ಅಪಘಾತವಾಗಿದೆ. ತುರ್ತು ಕಾರ್ಯಕ್ರಮದ ನಿಮಿತ್ತ ಅದೇ ದಾರಿಯಿಂದ ತೆರಳುತ್ತಿದ್ದ ಮಾಜಿ ಸಂಸದ ನಳಿನ್ ಕುಮಾ‌ರ್ ಕಟೀಲ್ ಅವರು ತನ್ನ ಬೆಂಗಾವಲು ವಾಹನದ ಮೂಲಕ ಗಾಯಾಳುವನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಲ್ಲದೆ, ನಂತರ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಕುಶಲೋಪರಿ ವಿಚಾರಿಸಿದರು.

Comments are closed.