Death: ಕಲ್ಯಾಣಿಯಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲು: ಮೊಬೈಲ್‌ನಲ್ಲಿ ದೃಶ್ಯ ಸೆರೆ

Share the Article

Death: ಬನ್ನೇರುಘಟ್ಟ (Bannerghatta) ಸಮೀಪದ ಸುವರ್ಣಮುಖಿ ಕಲ್ಯಾಣಿಯಲ್ಲಿ ಕಲ್ಯಾಣಿಯಲ್ಲಿ ಈಜಲು (Swim) ಹೋದ ವಿದ್ಯಾರ್ಥಿಗಳ ಪೈಕಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ನಡೆದಿದೆ.

ಬೊಮ್ಮನಹಳ್ಳಿ ಗಾರ್ವೇಬಾವಿ ಪಾಳ್ಯದ ದೀಪು (20), ಯೋಗಿಶ್ವರನ್ (20) ಮೃತ ವಿದ್ಯಾರ್ಥಿಗಳು. ಹೆಬ್ಬಗೋಡಿಯ ಕಾಲೇಜುವೊಂದರ ಐವರು ವಿದ್ಯಾರ್ಥಿಗಳು ಬನ್ನೇರುಘಟ್ಟ ಸುವರ್ಣಮುಖಿ ಕಲ್ಯಾಣಿಗೆ ಈಜಲು ತೆರಳಿದ್ದರು. ಈ ಪೈಕಿ ದೀಪು, ಯೋಗೀಶ್ವರನ್‌ಗೆ ಈಜಲು ಆಗದೆ ಹೋರಾಟ ನಡೆಸಿದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ.

ವಿದ್ಯಾರ್ಥಿಗಳು ಮುಳುಗುತ್ತಿದ್ದ ವೇಳೆ ರಕ್ಷಣೆ ಮಾಡಲು ಸಾಧ್ಯವಾಗದೇ ಉಳಿದ ಸ್ನೇಹಿತರು ಪರದಾಡಿದ್ದಾರೆ. ಈಜಲು ಬಾರದೇ ಒಬ್ಬರಾದ ಮೇಲೆ ಒಬ್ಬರಂತೆ ನೀರಿನಲ್ಲಿ ಮುಳುಗಿ ಸ್ನೇಹಿತರ

ಕಣ್ಣೆದುರೇ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಸಂಪೂರ್ಣ ಘಟನೆಯ ದೃಶ್ಯ ಅಲ್ಲಿದ್ದ ಯುವಕರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Comments are closed.