Cardiac Arrest: ನೃತ್ಯ ಮಾಡುತ್ತಿದ್ದಾಗ ಹೃದಯಾಘಾತದಿಂದ ಯುವತಿ ಸಾವು!

Cardiac Arrest: ಮದುವೆ ಸಮಾರಂಭದಲ್ಲಿ ನೃತ್ಯ ಮಾಡುತ್ತಿದ್ದಾಗ ಯುವತಿ ಹೃದಯಾಘಾತದಿಂದ (Cardiac Arrest) ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾಳೆ.

ಹೌದು, ವಿದಿಶಾ ಜಿಲ್ಲೆಯಲ್ಲಿ ರಿಣೀತಾ ಜೈನ್ ( 23) ಮೃತ ಯುವತಿ ವೇದಿಕೆಯಲ್ಲಿ ನೃತ್ಯ ಮಾಡುತ್ತಿದ್ದಾಗ ಯುವತಿ ಹೃದಯಾಘಾತದಿಂದ ಕುಸಿದು ಬಿದ್ದ ಕೂಡಲೇ ಸಂಬಂಧಿಕರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ, ಆಕೆ ಈಗಾಗಲೇ ಮೃತಪಟ್ಟಿದ್ದಾಳೆಂದು ವೈದ್ಯರು ದೃಢಪಡಿಸಿದ್ದಾರೆ.

ಇನ್ನು ನೃತ್ಯ ಮಾಡುತ್ತಾ ಕುಸಿದು ಬೀಳುವ ಯುವತಿಯ ದೃಶ್ಯಗಳು ಕ್ಯಾಮೆರಾದಲ್ಲಿ ದಾಖಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Comments are closed.