Chikkamagaluru: ಶೃಂಗೇರಿಯಲ್ಲಿ ಕಾರು ಬೈಕ್‌ ನಡುವೆ ಡಿಕ್ಕಿ; ನೈತಿಕ ಪೊಲೀಸ್‌ಗಿರಿ

Share the Article

Chikkamagaluru: ಶೃಂಗೇರಿಯಲ್ಲಿ ಕಾರು ಬೈಕ್‌ ನಡುವೆ ಡಿಕ್ಕಿ ಸಂಭವಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಅನ್ಯಧರ್ಮಿಯರ ಕಾರನ್ನು ಅಡ್ಡಹಾಕಿ ನೈತಿಕ ಪೊಲೀಸ್‌ಗಿರಿ ನಡೆದಿರುವ ಘಟನೆಯೊಂದು ನಡೆದಿದೆ.

 

ಶೃಂಗೇರಿ ಬಸ್‌ ನಿಲ್ದಾಣದ ಬಳಿ ಬಜರಂಗದಳದ ಕಾರ್ಯಕರ್ತರು ಕಾರನ್ನು ಅಡ್ಡಗಟ್ಟಿದ್ದು ಕಾರಿನಲ್ಲಿದ್ದ ಚಾಲಕ ಸೇರಿ ಐವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಮುಸ್ಲಿಂ ಕುಟುಂಬದ ಮೂವರು ಕಾರಿನಲ್ಲಿ ಬರುತ್ತಿದ್ದು, ಈ ಸಂದರ್ಭದಲ್ಲಿ ಹರಿಹರಪುರ ಸಮೀಪ ಬೈಕ್‌ ಮತ್ತು ಕಾರಿನ ನಡುವೆ ಡಿಕ್ಕಿಯಾಗಿದೆ. ಹಾಗಾಗಿ ಶೃಂಗೇರಿ ಪಟ್ಟಣದಲ್ಲಿ ಮುಸ್ಲಿಂ ಕುಟುಂಬದ ಮೇಲೆ ಹಲ್ಲೆ ಮಾಡಿದ್ದು, ಗಾಯಗೊಂಡವರು ಶೃಂಗೇರಿ ಆಸ್ಪತ್ರೆಗೆ ದಾಖಲು ಮಾಡಲಾಗಿರುವ ಕುರಿತು ವರದಿಯಾಗಿದೆ.

ಈ ಸಂಬಂಧ ಹರಿಹರಪುರ ಪೊಲೀಸ್‌ ಠಾಣೆಯಲ್ಲಿ ಬೈಕ್‌ ಕಾರು ಅಪಘಾತ ಪ್ರಕರಣ, ಶೃಂಗೇರಿ ಪೊಲೀಸ್‌ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ.

Comments are closed.