Government employees: ರಾಜ್ಯ ಸರ್ಕಾರಿ ನೌಕರರಿಗೆ `ಗಳಿಕೆ ರಜೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ!

Government employees: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಗಳಿಕೆ ರಜೆ ಕುರಿತಂತೆ ಮಹತ್ವದ ಆದೇಶವನ್ನು ಹೊರಡಿಸಿದೆ.

ಸರ್ಕಾರಿ ನೌಕರರಿಗೆ (Government employees) ಗಳಿಕೆ ರಜೆ ಕುರಿತಂತೆ ಆರ್ಥಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸೇರ್ಪಡೆ ಆದೇಶವನ್ನು ಹೊರಡಿಸಿದ್ದು, ಅದರಲ್ಲಿ ದಿನಾಂಕ 21.12.2023 ರ ಸರ್ಕಾರಿ ಆದೇಶ ಸಂಖ್ಯೆ ಆಇ 10(ಇ) ಸೇನಿಸೇ 2023 ಮತ್ತು ದಿನಾಂಕ 17.1.2025 ರ ಸರ್ಕಾರಿ ಆದೇಶ ಸಂಖ್ಯೆ ಆಇ 03 ಸೇನಿಸೇ 2024 ರ ಆದೇಶ ಭಾಗದ ಕೊನೆಯಲ್ಲಿ ಈ ಕೆಳಗಿನವುಗಳನ್ನು ಸೇರಿಸಿ ಓದಿಕೊಳ್ಳತಕ್ಕದ್ದು ಎಂಬುದಾಗಿ ಹೇಳಿದ್ದಾರೆ.

ಗಳಿಕೆ ರಜೆ ನಗದೀಕರಣಕ್ಕೆ ಮಂಜೂರಾತಿ ನೀಡುವ ಆದೇಶವನ್ನು ಯಾವುದಾದರೂ ಕಾರಣದಿಂದ ನಿಗಧಿತ ಬ್ಲಾಕ್‌ ಅವಧಿಯಲ್ಲಿ ಹೊರಡಿಸಲು ಸಾಧ್ಯವಾಗದಿದ್ದರೆ ಸಂಬಂಧಿತ ಪ್ರಾಧಿಕಾರವು ಅಂತಹ ಆದೇಶವನ್ನು ಬ್ಲಾಕ್‌ ಅವಧಿ ಮುಕ್ತಾಯಗೊಂಡ ನಂತರವೂ ಹೊರಡಿಸಬಹುದು. ಆದರೆ, ಗಳಿಕೆ ರಜೆ ನಗದೀಕರಣದ ಆರ್ಥಿಕ ಪ್ರಯೋಜನವನ್ನು ಸಂಬಂಧಿತ ಆರ್ಥಿಕ ವರ್ಷವು ಅಂತ್ಯಗೊಳ್ಳುವ ಮುನ್ನ ಪಡೆಯತಕ್ಕದ್ದು ಎಂಬುದಾಗಿ ತಿಳಿಸಿದ್ದಾರೆ.

Comments are closed.