Mysuru: ಮುಸ್ಲಿಂ ಯುವಕರಿಂದ ಠಾಣೆ ಮೇಲೆ ಕಲ್ಲು ತೂರಾಟ: 14 ಪೊಲೀಸರಿಗೆ ಗಾಯ

Mysuru: ಮೈಸೂರಿನ (Mysuru) ಉದಯಗಿರಿ ಪೊಲೀಸ್ ಠಾಣೆ ಮೇಲೆ ಅವಹೇಳನಕಾರಿ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ, ಮುಸ್ಲಿಂ ಯುವಕರು ಕಲ್ಲಿನ ದಾಳಿ ಮಾಡಿದ್ದು, ಇನ್‌ಸ್ಪೆಕ್ಟರ್ ಸೇರಿದಂತೆ 14 ಪೊಲೀಸರಿಗೆ ಗಾಯಗಳಾಗಿವೆ. 10 ಕ್ಕೂ ಹೆಚ್ಚು ಪೊಲೀಸ್ ವಾಹನಗಳ ಜಖಂ ಆಗಿವೆ.
ಅವಹೇಳನಕಾರಿ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ತೀವ್ರ ರೂಪ ತಾಳಿದ್ದು, ಇನ್‌ಸ್ಪೆಕ್ಟರ್ ಸೇರಿ 14 ಕ್ಕೂ ಹೆಚ್ಚು ಪೊಲೀಸರಿಗೆ ಗಾಯವಾಗಿದೆ. ಎಸಿಪಿ ಶಾಂತ ಮಲ್ಲಪ್ಪ, ನಜರಬಾದ್ ಇನ್ಸ್ಪೆಕ್ಟರ್ ಮಹದೇವಸ್ವಾಮಿ ಸೇರಿ 14 ಮಂದಿಗೆ ಕಲ್ಲೇಟು ಬಿದ್ದಿದೆ. ಸದ್ಯ ಕಲ್ಲೇಟಿನಿಂದ ಗಾಯಗೊಂಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Comments are closed.