POCSO: ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ

Share the Article

POCSO: ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕು ಬಳಿಕ ಲಿಂಗಸುಗೂರು (Lingasuguru) ತಾಲೂಕಿನಲ್ಲಿ ನಡೆದಿದೆ.

ಆರೋಪಿ 43 ವರ್ಷದ ಚಂದ್ರಶೇಖರ ಪೇಂಟಿಂಗ್ ಕೆಲಸ ಮಾಡುತ್ತಿದ್ದು, ಮಾನಸಿಕ ಖಿನ್ನತೆಗೆ ಒಳಗಾಗಿ, ಓದಲು ಬರೆಯಲು ಸರಿಯಾಗಿ ಬಾರದ ವಿದ್ಯಾರ್ಥಿನಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಬಿಟ್ಟ ವೇಳೆ ಬಾಲಕಿ ಶಾಲೆ ಪಕ್ಕದ ಅಂಗಡಿಗೆ ತೆರಳಿದ್ದಾಳೆ. ಅಂಗಡಿ ಬಳಿ ಚಾಕೊಲೇಟ್ ಕೊಟ್ಟು ಆಸೆ ತೋರಿಸಿ ಬಾಲಕಿಯನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಬಾಲಕಿಯನ್ನ ಕರೆದೊಯ್ಯುವುದನ್ನ ಗಮನಿಸಿದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮನೆ ಬಾಗಿಲು ಮುರಿದು ಒಳನುಗಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯ ವಿರುದ್ಧ ಪೋಕ್ಸೋ (POCSO) ಪ್ರಕರಣ ದಾಖಲಾಗಿದೆ.

Comments are closed.