Acharya Satyendra Das Death: ರಾಮಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ

Acharya Satyendra Das Death: ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಫೆಬ್ರವರಿ 12 ರಂದು ಬುಧವಾರ ನಿಧನರಾಗಿದ್ದಾರೆ. ಈ ಕುರಿತು ಆಸ್ಪತ್ರೆ ಮಾಹಿತಿ ನೀಡಿದೆ. ಮೆದುಳಿನ ರಕ್ತಸ್ರಾವದ ನಂತರ ಲಕ್ನೋದ ಪಿಜಿಐನಲ್ಲಿ ಇವರು ಚಿಕಿತ್ಸೆ ಪಡೆಯುತ್ತಿದ್ದರು.

ಆಸ್ಪತ್ರೆಯ ಪತ್ರಿಕಾ ಪ್ರಕಟಣೆಯಲ್ಲಿ, ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಶ್ರೀ ಸತೇಂದ್ರ ದಾಸ್ ಜಿ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ಹೇಳಿದ್ದಾರೆ. ಫೆಬ್ರವರಿ 3 ರಂದು ಪಾರ್ಶ್ವವಾಯು ಕಾರಣ ಗಂಭೀರ ಸ್ಥಿತಿಯಲ್ಲಿ ಅವರನ್ನು ಎಚ್ಡಿಯು ನ್ಯೂರಾಲಜಿ ವಾರ್ಡ್ಗೆ ದಾಖಲಿಸಲಾಯಿತು. ಆಚಾರ್ಯ ಸತ್ಯೇಂದ್ರ ದಾಸ್ ಅವರು ತಮ್ಮ 85 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು.
ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆಯಲ್ಲಿ (SGPGI) ಬ್ರೈನ್ ಸ್ಟ್ರೋಕ್ನಿಂದ ದಾಖಲಾಗಿದ್ದ ಶ್ರೀ ರಾಮ ಜನ್ಮಭೂಮಿ ದೇವಸ್ಥಾನ-ಅಯೋಧ್ಯೆಯ ಮುಖ್ಯ ಅರ್ಚಕ ಮಹಂತ್ ಸತ್ಯೇಂದ್ರ ದಾಸ್ (85) ಅವರನ್ನು ಫೆಬ್ರವರಿ 3 ರಂದು ಅವರ ಆರೋಗ್ಯ ಹದಗೆಟ್ಟ ನಂತರ ಅವರನ್ನು ದಾಖಲಿಸಲಾಯಿತು.
Comments are closed.