Sukri Bommagowda: ಹಾಲಕ್ಕಿ ‘ಕೋಗಿಲೆ’, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಇನ್ನಿಲ್ಲ !!

Sukri Bommagowda: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಪ್ರದ್ಮಶ್ರೀ ಪ್ರಶಸ್ತಿ ವಿಜೇತ ಜನಪದ ಹಾಡುಗಾರ್ತಿ, ಹೋರಾಟಗಾರ್ತಿ ಸುಕ್ರಿ ಬೊಮ್ಮಗೌಡ ವಿಧಿವಶರಾಗಿದ್ದಾರೆ.

88 ವರ್ಷದ ಸುಕ್ರಿ ಬೊಮ್ಮಗೌಡ ಗುರುವಾರ ಮುಂಜಾನೆ ಅಂಕೋಲಾ ತಾಲೂಕಿನ ಬಡಗೇರಿಯ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದ ಅವರನ್ನು ಮನೆಗೆ ವಾಪಸ್ ಕರೆದುಕೊಂಡು ಬರಲಾಗಿತ್ತು.

ಬುಧವಾರ ತಡರಾತ್ರಿ ತನಕ ಕುಟುಂಬ ಸದಸ್ಯರ ಜೊತೆ ಸುಕ್ರಿ ಬೊಮ್ಮಗೌಡ ಮಾತುಕತೆ ನಡೆಸಿದ್ದರು. ಗುರುವಾರ ಮುಂಜಾನೆ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.

ಅಂದಹಾಗೆ ಹಾಲಕ್ಕಿ ಬುಡಕಟ್ಟು ಜನಾಂಗದಲ್ಲಿ ಹುಟ್ಟಿದ ಇವರು ವಿದ್ಯಭ್ಯಾಸ ಮಾಡದಿದ್ದರೂ ಹಾಲಕ್ಕಿ ಜನಾಂಗದ ಜನಪದ ಹಾಡುಗಳನ್ನು ಹಾಡುವ ಮೂಲಕ ಹಳ್ಳಿ ಸೊಗಡನ್ನ ದಿಲ್ಲಿಗೆ ಕೊಂಡೊಯ್ದ ಕೀರ್ತಿ ಹೊಂದಿದ್ದಾರೆ. ಇದಲ್ಲದೇ ಮದ್ಯ ಮುಕ್ತ ಗ್ರಾಮ ಮಾಡುವ ಹೋರಾಟದಲ್ಲಿ ಭಾಗಿಯಾದ ಇವರು ತಮ್ಮ ಊರನ್ನು ಮದ್ಯ ಮುಕ್ತ ಗ್ರಾಮವನ್ನಾಗಿಸಿದರು. 2017 ರಲ್ಲಿ ಇವರ ಜನಪದ ಹಾಡಿನ ಸಾಧನೆಗೆ ಪದ್ಮಶ್ರೀ ಪ್ರಶಸ್ತಿ ಸಂದಿದೆ.

Comments are closed.