Kota Srinivas Poojary: ಕರಾವಳಿ ಭಾಗದವರಿಗೆ ಸಿಹಿ ಸುದ್ದಿ, ಪ್ರಯಾಗ್‌ರಾಜ್‌ಗೆ ಉಡುಪಿಯಿಂದ ವಿಶೇಷ ರೈಲು

Kota Srinivas Poojary: ರಾಜ್ಯದ ಕರಾವಳಿ ಭಾಗದಿಂದ ಕುಂಭಮೇಳಕ್ಕೆ ಹೋಗಲಿಚ್ಛಿಸುವ ಭಕ್ತರಿಗೆ ಸಿಹಿ ಸುದ್ದಿಯೊಂದು ಬಂದಿದೆ. ಯಾತ್ರಾರ್ಥಿಗಳಿಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗುತ್ತದೆ ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಮಾಹಿತಿ ನೀಡಿದ್ದಾರೆ.
ಕರಾವಳಿ ಭಾಗದಿಂದ ಕುಂಭಮೇಳಕ್ಕೆ ತೆರಳುವ ಯಾತ್ರಾರ್ಥಿಗಳ ಗಮನಕ್ಕೆ…
17ನೇ ತಾರೀಖು ಮಧ್ಯಾಹ್ನ 12.30ಗೆ ಉಡುಪಿಯಿಂದ ಹೊರಟ ರೈಲು 19ನೇ ತಾರೀಖಿನಂದು ಬೆಳಿಗ್ಗೆ 6.30ಗಂಟೆಗೆ ಪ್ರಯಾಗ್ ರಾಜ್ ತಲುಪಲಿದೆ. ಹಾಗೂ ಮಾರನೇ ದಿನ 20ನೇ ತಾರೀಖಿನಂದು ಸಂಜೆ 6.30ಗಂಟೆಗೆ ಪ್ರಯಾಗ್ ರಾಜ್ ನಿಂದ ಹೊರಟು 22ರಂದು ಉಡುಪಿ ತಲುಪಲಿದೆ.
1/2 pic.twitter.com/OQZAsxvGJ2— Kota Shrinivas Poojari (@KotasBJP) February 12, 2025
ಈ ಕುರಿತು ಅವರು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ʼಕರಾವಳಿ ಭಾಗದಿಂದ ಕುಂಭಮೇಳಕ್ಕೆ ತೆರಳುವ ಯಾತ್ರಾರ್ಥಿಗಳ ಗಮನಕ್ಕೆ… ಫೆ.17ನೇ ತಾರೀಖು ಮಧ್ಯಾಹ್ನ 12.30ಗೆ ಉಡುಪಿಯಿಂದ ಹೊರಟ ರೈಲು 19ನೇ ತಾರೀಖಿನಂದು ಬೆಳಿಗ್ಗೆ 6.30ಗಂಟೆಗೆ ಪ್ರಯಾಗ್ ರಾಜ್ ತಲುಪಲಿದೆ. ಹಾಗೂ ಮಾರನೇ ದಿನ 20ನೇ ತಾರೀಖಿನಂದು ಸಂಜೆ 6.30ಗಂಟೆಗೆ ಪ್ರಯಾಗ್ ರಾಜ್ ನಿಂದ ಹೊರಟು 22ರಂದು ಉಡುಪಿ ತಲುಪಲಿದೆ. ಈ ರೈಲಿನಲ್ಲಿ ತೆರಳುವ ಪ್ರಯಾಣಿಕರಿಗೆ ಟಿಕೆಟ್ ವಿವರವನ್ನು ಶೀಘ್ರದಲ್ಲೇ ತಿಳಿಸಲಾಗವುದು. ಪ್ರಯಾಗ್‌ರಾಜ್ ತೆರಳಲಿರುವ ಯಾತ್ರಾರ್ಥಿಗಳು ಸಿದ್ಧತೆಗಳನ್ನು ಮಾಡಿಕೊಳ್ಳಿ. ಗೌರವಾನ್ವಿತ ಕೇಂದ್ರ ರೈಲ್ವೆ ಸಚಿವರ ಮೌಖಿಕ ಸೂಚನೆಯ ಮೇರೆಗೆ ಈ ವಿಚಾರವನ್ನು ತಮಗೆಲ್ಲರಿಗೂ ತಿಳಿಸಲು ಹರ್ಷಿಸುತ್ತೇನೆ’ ಎಂದು ಅವರು ಬರೆದಿದ್ದಾರೆ.
Comments are closed.