Metro: ಜನಾಕ್ರೋಶ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಇಳಿಕೆ !!

Metro: ಕೆಲವು ದಿನಗಳ ಹಿಂದಷ್ಟೇ ಮೆಟ್ರೋ ದರವನ್ನು ಏರಿಸಿ ಬಿಎಂಆರ್ಸಿಎಲ್ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ಬಾರಿ ಜನಾಕ್ರೋಶ ವ್ಯಕ್ತವಾಗಿದ್ದು ಮೆಟ್ರೋ ಪ್ರಯಾಣಿಕರಲ್ಲಿಯೂ ಗಣನೀಯವಾಗಿ ಇಳಿಕೆ ಕಂಡಿತ್ತು. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ಮೆಟ್ರೋ ಪ್ರಯಾಣದರ ಇಳಿಕೆ ಮಾಡಲು ಸೂಚನೆ ನೀಡಿದ್ದರು. ಅಂತೆಯೇ ಇದೀಗ ದರವನ್ನು ಇಳಿಕೆ ಮಾಡಲಾಗಿದೆ. ಹಾಗಿದ್ರೆ ಎಷ್ಟು ಇಳಿಕೆಯಾಗಿದೆ?
ಯಾವ ನಿಲ್ದಾಣದಿಂದ ಎಲ್ಲಿಗೆ ಎಷ್ಟು ದರ ಇಳಿಕೆ?
* ಮೆಜೆಸ್ಟಿಕ್ನಿಂದ ವೈಟ್ಫಿಲ್ಡ್ಗೆ 90 ರೂ. ಇದ್ದ ದರ ಈಗ 80 ರೂ. ಆಗಿದೆ.
* ಮೆಜೆಸ್ಟಿಕ್ನಿಂದ ಚಲ್ಲಘಟ್ಟಕ್ಕೆ 70 ರೂ. ಇದ್ದ ದರ ಈಗ 60 ರೂ. ಆಗಿದೆ
* ಮೆಜೆಸ್ಟಿಕ್ನಿಂದ ವಿಧಾನಸೌಧಕ್ಕೆ 20 ರೂ. ಇದ್ದ ದರ ಈಗ 10 ರೂ. ಆಗಿದೆ
* ಮೆಜೆಸ್ಟಿಕ್ನಿಂದ ಕಬ್ಬನ್ಪಾರ್ಕ್ಗೆ ಇದ್ದ 20 ರೂ. ದರ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ.
* ಮೆಜೆಸ್ಟಿಕ್ನಿಂದ ಬೈಯಪ್ಪನಹಳ್ಳಿಗೆ 60 ಇದ್ದ ದರ ಈಗ 50 ರೂ. ಆಗಿದೆ.
* ಮೆಜೆಸ್ಟಿಕ್ನಿಂದ ರೇಷ್ಮೆ ಸಂಸ್ಥೆಗೆ ಇದ್ದ 70 ರೂ. ದರ ಈಗ 60 ರೂ. ಆಗಿದೆ.
* ಜಾಲಹಳ್ಳಿಯಿಂದ ರೇಷ್ಮೆ ಸಂಸ್ಥೆಗೆ 90 ರೂ. ದರದಲ್ಲಿ ಬದಲಾವಣೆ ಇಲ್ಲ
* ನಮ್ಮ ಮೆಟ್ರೋ ಕನಿಷ್ಠ, ಗರಿಷ್ಠ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
Comments are closed.