Bantwala : ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಆಟೋ, ಸ್ಥಳದಲ್ಲಿ ಚಾಲಕ ಸಾವು – ಮೂವರು ಮಕ್ಕಳಿಗೆ ಗಾಯ!!

Share the Article

Bantwala : ಆಟೋರಿಕ್ಷಾ ಒಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದು ಚಾಲಕ ಸ್ಥಳದಲ್ಲಿ ಮೃತ ಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಹೌದು, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಗಾಣೆಮಾರ್ ಎಂಬಲ್ಲಿ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ರಿಕ್ಷಾ ಚಾಲಕ ಅಮ್ಮುಂಜೆ ನಿವಾಸಿ ಮಹಾಬಲ ಪೂಜಾರಿ ( 37) ಎಂದು ಗುರುತಿಸಲಾಗಿದೆ.

ಇನ್ನೂ ಆಟೋದಲ್ಲಿದ್ದ ಮೂವರು ಮಕ್ಕಳು ಗಾಯಗೊಂಡಿದ್ದಾರೆ. ಚಾಲಕನ ಸಂಬಂಧಿಗಳಾದ ತುಷಾರ್,ಭವಿತ್ ಮತ್ತು ಪ್ರದೀಪ್ ಎಂಬವರು ಗಾಯಗೊಂಡ ಮಕ್ಕಳು. ಮೂಡಬಿದಿರೆಯ ಮಿಜಾರು ಎಂಬಲ್ಲಿಗೆ ಜಾತ್ರೆಗೆ ಹೋಗಿ ಮರಳುವ ವೇಳೆ ಮನೆಗೆ ಸುಮಾರು 500 ಮೀ ದೂರದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಚಾಲಕನ ನಿಯಂತ್ರಣ ‌ಕಳೆದುಕೊಂಡ ರಿಕ್ಷಾ ತಲೆಕೆಳಗಾದ ಸ್ಥಿತಿಯಲ್ಲಿ ಚರಂಡಿಗೆ ಬಿದ್ದಿದೆ. ಮೂವರು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಬಂಟ್ವಾಳ ಸಂಚಾರಿ ಪೋಲಿಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

Comments are closed.