Mysure : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ – ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸರು!!

Mysure : ಒಂದೇ ಕುಟುಂಬದ ನಾಲ್ವರು ಅತ್ಮಹತ್ಯೆ ಶರಣಾಗಿರುವ ಘಟನೆಯೊಂದು ಮೈಸೂರಿನ ವಿಶ್ವೇಶ್ವನಗರದ ಅಪಾರ್ಟ್ಮೆಂಟ್ ನಲ್ಲಿ ಸೋಮವಾರ ನಡೆದಿದೆ. ಇದೀಗ ಈ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ.
ಹೌದು, ನಾಲ್ವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ನಡೆಸಿದಾಗ ಡೆತ್ ನೋಟ್ ಪತ್ತೆಯಾಗಿದ್ದು ಹಣಕಾಸು ವಿಚಾರಕ್ಕೆ ಎಲ್ಲರೂ ಸ್ವ ಇಚ್ಚೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತಿಳಿದು ಬಂದಿತ್ತು. ಆದರೆ ಈಗ ಇದಕ್ಕೆ ಟ್ವಿಸ್ಟ್ ಸಿಕ್ಕಿದೆ. ಹಣಕಾಸಿನ ನಷ್ಟದ ವಿಚಾರಕ್ಕೆ ಮನೆಯ ಯಜಮಾನನೇ ತನ್ನ ಕುಟುಂಬದ ಸದಸ್ಯರಾದ ತಾಯಿ, ಹೆಂಡತಿ ಹಾಗೂ ಮಗನನ್ನು ತಾನೇ ಕೊಲೆ ಮಾಡಿದ್ದಾನೆ. ಈ ಕುರಿತಾಗಿ ಪೊಲೀಸರೇ ಇಂಚಿಂಚು ಮಾಹಿತಿ ಬಿಚ್ಚಿಟ್ಟಿದ್ದಾರೆ.
ಯಸ್, ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಸಾವು. ಮೈಸೂರು ವಿಶ್ವೇಶ್ವರಯ್ಯ ನಗರದ ಅಪಾರ್ಟ್‌ಮೆಂಟನಲ್ಲಿ ಘಟನೆ ನಡೆದಿದೆ. ಮೃತರನ್ನು ಮನೆ ಮಾಲೀಕ ಚೇತನ (45), ಆತನ ಹೆಂಡತಿ ರೂಪಾಲಿ (43) ಆತನ ತಾಯಿ ಪ್ರಿಯಂವಧ (62) ಹಾಗೂ ಆತನ ಮಗ ಕುಶಾಲ್ (15) ಎಂದು ಗುರುತಿಸಲಾಗಿದೆ. ಚೇತನ್ ನೇಣು ಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದರೆ, ಉಳಿದ ಮೂವರ ಶವಗಳು ಹಾಸಿಗೆ ಮೇಲೆ ಪತ್ತೆಯಾಗಿವೆ. ಸ್ವತಃ ಚೇತನ್ ತನ್ನ ತಾಯಿ, ಹೆಂಡತಿ ಹಾಗೂ ಮಗನಿಗೆ ವಿಷ ನೀಡಿ ಮನೆಯವರನ್ನು ಸಾಯಿಸಿ ತಾನು ನೇಣು ಬಿಗಿದುಕೊಂಡಿದ್ದಾನೆ.
ಈ ವಿಚಾರ ಪೊಲೀಸರಿಗೆ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಕಮಿಷನರ್ ಸೀಮಾ ಲಾಟ್ಕರ್ ಡಿಸಿಪಿ ಜಾನ್ಹವಿ, ವಿದ್ಯಾರಣ್ಯಪುರಂ ಇನ್ಸಪೆಕ್ಟರ್ ಮೋಹಿತ್ ಸೇರಿ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆರಂಭದಲ್ಲಿ ಸಾವಿಗೆ ನಿಖರ ಕಾರಣ ತಿಳಿದು ಬಂದಿರಲಿಲ್ಲ. ಈ ಘಟನೆ ಕುರಿತಂತೆ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.
ಪೊಲೀಸರು ಹೇಳಿದ್ದೇನು?
ಇಲ್ಲಿ ನಾಲ್ಕು ಜನರ ಸಾವಾಗಿದೆ. ಇವರು ಎರಡು ಅಪಾರ್ಟ್‌ಮೆಂಟ್‌ನಲ್ಲಿದ್ದರು. ಮೃತ ಚೇತನ್ ಸೌದಿ ಅರೇಬಿಯಾಗೆ ಕಾರ್ಮಿಕರನ್ನು ಕಳುಹಿಸುವ ಕೆಲಸ ಮಾಡುತ್ತಿದ್ದರು. ಕಳೆದ 2019ರಲ್ಲಿ ಅಪಾರ್ಟ್ ಮೆಂಟ್ ಖರೀದಿಸಿದ್ದರು. ಮಗ 10ನೇ ತರಗತಿ ಓದುತ್ತಿದ್ದ. ಚೇತನ್ ಅಣ್ಣ ವಿದೇಶದಲ್ಲಿದ್ದಾರೆ. ವಿದೇಶದಲ್ಲಿರುವ ಚೇತನ್ ಅಣ್ಣನೇ ಮೃತ ಚೇತನ್ ಹೆಂಡತಿಯ ಅಪ್ಪ ಅಮ್ಮನಿಗೆ ಬೆಳ್ಳಗಿನ ಜಾವ ಕರೆ ಮಾಡಿ ಅಪಾರ್ಟ್‌ಮೆಂಟ್ ಬಳಿಗೆ ಹೋಗಲು ಹೇಳಿದ್ದಾರೆ. ಅವರು ಬಂದು ನೋಡಿದ್ದಾಗ ವಿಚಾರ ಗೊತ್ತಾಗಿದೆ.
ಅಂದಹಾಗೆ ಚೇತನ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಅಮೇರಿಕಾದಲ್ಲಿ ವಾಸವಾಗಿರುವ ಸಹೋದರ ಭರತ್‌ಗೆ ಕರೆ ಮಾಡಿದ್ದಾನೆ. ಬೆಳಗಿನ ಜಾವ 4 ಗಂಟೆಗೆ ಕರೆ ಮಾಡಿ, ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿ ಫೋನ್ ಕಟ್ ಮಾಡಿದ್ದಾನೆ. ಆಗ ಚೇತನ್ ಪತ್ನಿಯ ತಂದೆ ತಾಯಿಗೆ ಕರೆ ಮಾಡಿದ ಭರತ್ ತುರ್ತಾಗಿ ಅಪಾರ್ಟ್‌ಮೆಂಟ್ ತೆರಳುವಂತೆ ಹೇಳಿದ್ದಾರೆ. ಚೇತನ್ ಅವರ ಅತ್ತೆ ಮನೆಗೆ ಬರುವಷ್ಟರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನು. ಮನೆಗೆ ಬಂದು ನೋಡಿದಾಗ ಸ್ವತಃ ಚೇತನ್ ತಾಯಿ, ಪತ್ನಿ, ಮಗನನ್ನು ಕೊಲೆ ಮಾಡಿದ್ದಾನೆಂಬುದು ತಿಳಿದುಬಂದಿದೆ. ಮೂವರಿಗೂ ವಿಷ ಉಣಿಸಿ ಉಸಿರುಗಟ್ಟಿಸಿ ಕೊಲೆ ಮಾಿದ್ದಾನೆ. ನತರ ತಾನು ಸಾವಿಗೆ ಶರಣಾಗಿದ್ದಾನೆ. ಈ ಘಟನೆ ಕುರಿತಂತೆ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.
Comments are closed.