Telangana Government : ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಅವಧಿ ಕಡಿತ – ಕಚೇರಿಯಿಂದ ಬೇಗ ಹೋಗಲು ಸರ್ಕಾರದಿಂದ ಆದೇಶ !!

Telangana Government : ಕಾಂಗ್ರೆಸ್​​ (Congress) ನೇತೃತ್ವದ ತೆಲಂಗಾಣ ಸರ್ಕಾರವು (Telangana Govt) ಸರ್ಕಾರಿ ಇಲಾಖೆಗಳು, ಸಾರ್ವಜನಿಕ ವಲಯದ ಸಂಸ್ಥೆಗಳ ಮುಸ್ಲಿಂ ಉದ್ಯೋಗಿಗಳಿಗೆ ಕೆಲಸದಿಂದ ಬೇಗ ತೆರಳಲು ಅವಕಾಶ ಮಾಡಿಕೊಟ್ಟಿದೆ. ಇದು ಬಾರಿ ಆಕ್ರೋಶಕ್ಕೆ ಕಾರಣವಾಗಿದೆ.

 

ಹೌದು, ಕಾಂಗ್ರೆಸ್ ನೇತೃತ್ವದ ತೆಲಂಗಾಣ ಸರ್ಕಾರ ಸೋಮವಾರ ರಂಜಾನ್ ಉಪವಾಸದ ಸಮಯದಲ್ಲಿ ಮುಸ್ಲಿಂ ಉದ್ಯೋಗಿಗಳಿಗೆ ಕೆಲಸದ ಸಮಯವನ್ನು ಕಡಿಮೆ ಮಾಡುವುದಾಗಿ ಘೋಷಿಸಿದೆ. ಪವಿತ್ರ ರಂಜಾನ್‌ ಮಾಸದಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ಕಚೇರಿಯಿಂದ ಬೇಗನೆ ಹೊರಡುವುದಕ್ಕೆ ಅವಕಾಶ ನೀಡಿ ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದ್ದು ಈ ಆದೇಶವೀಗ ವಿವಾದಕ್ಕೆ ಕಾರಣವಾಗಿದೆ. ತೆಲಂಗಾಣದ ಕಾಂಗ್ರೆಸ್ ಸರ್ಕಾರವು ಪವಿತ್ರ ರಂಜಾನ್ ತಿಂಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಉದ್ಯೋಗಿಗಳಿಗೆ 1 ಗಂಟೆ ಮುಂಚಿತವಾಗಿ ಕೆಲಸ ಬಿಡಲು ಅವಕಾಶ ನೀಡಿದೆ.

 

ಆದೇಶದಲ್ಲಿ ಏನಿದೆ?

ಚಂದ್ರ ದರ್ಶನದ ಆಧಾರದಲ್ಲಿ ಮಾರ್ಚ್ 1 ಅಥವಾ ಮಾರ್ಚ್ 2 ರಂದು ರಂಜಾನ್ ತಿಂಗಳು ಪ್ರಾರಂಭವಾಗಲಿದೆ. ಅಲ್ಲಿಂದ ಮಾರ್ಚ್ 31, 2025 ರವರೆಗೆ ಜಾರಿಯಲ್ಲಿರುವಂತೆ ಮುಸ್ಲಿಂ ಉದ್ಯೋಗಿಗಳು ಒಂದು ಗಂಟೆ ಮುಂಚಿತವಾಗಿ ಕಚೇರಿಗಳಿಂದ ತೆರಳಬಹುದು ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಂತಿ ಕುಮಾರಿ ಅವರು ಆದೇಶ ಹೊರಡಿಸಿದ್ದಾರೆ. ಆದರಂತೆ ಮುಸ್ಲಿಂ ಉದ್ಯೋಗಿಗಳು ಸಾಮಾನ್ಯವಾಗಿ ಸಂಜೆ 5.00 ಗಂಟೆಗೆ ತೆರಳುವ ಬದಲು ಸಂಜೆ 4.00 ಗಂಟೆಗೆ ಹೊರಡಲು ಅನುವು ಮಾಡಿಕೊಡುತ್ತದೆ. ಈ ಆದೇಶಗಳು ಮುಸ್ಲಿಂ ಶಿಕ್ಷಕರು, ಗುತ್ತಿಗೆ ನೌಕರರು, ಹೊರಗುತ್ತಿಗೆ, ಮಂಡಳಿ ಮತ್ತು ಸಾರ್ವಜನಿಕ ವಲಯದ ಕಾರ್ಮಿಕರಿಗೆ ಅನ್ವಯಿಸುತ್ತವೆ ಎನ್ನಲಾಗಿದೆ. ಏತನ್ಮಧ್ಯೆ ತುರ್ತು ಸಂದರ್ಭದಲ್ಲಿ ಅವರ ಅವಶ್ಯಕತೆ ಇದ್ದರೆ, ಸಂಜೆ 5.00 ಗಂಟೆವರೆಗೂ ಮುಂದುವರೆಯ ಬೇಕೆಂದು ತಿಳಿಸಿದೆ.

 

ಬಿಜೆಪಿ ಟೀಕೆ :

ಮುಸ್ಲಿಂ ಉದ್ಯೋಗಿಗಳಿಗೆ ಕೆಲಸದ ಸಮಯವನ್ನು ಕಡಿತಗೊಳಿಸುವ ಅವಕಾಶ ನೀಡಿದ್ದಕ್ಕಾಗಿ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಕಟುವಾಗಿ ಟೀಕಿಸಿದೆ. ಇದನ್ನು ತುಷ್ಟೀಕರಣ ತಂತ್ರ ಎಂದು ಕರೆದಿರುವ ಬಿಜೆಪಿ, ನವರಾತ್ರಿಯ ಉಪವಾಸದ ಸಮಯದಲ್ಲಿ ಹಿಂದೂಗಳಿಗೆ ಅಂತಹ ಯಾವುದೇ ರಿಯಾಯಿತಿಗಳನ್ನು ನೀಡಲಾಗಿಲ್ಲ ಎಂದು ಆರೋಪಿಸಿದೆ.

Comments are closed.