Election: ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

Election: ನಿವೃತ್ತಿ ಹೊಂದುತ್ತಿರುವ ರಾಜೀವ್ ಕುಮಾರ್ ಅವರ ಸ್ಥಾನದಲ್ಲಿ ಹಿರಿಯ ಅಧಿಕಾರಿ ಜ್ಞಾನೇಶ್ ಕುಮಾರ್ ಅವರನ್ನು ಮುಖ್ಯ ಚುನಾವಣಾ (Election) ಆಯುಕ್ತರನ್ನಾಗಿ ನೇಮಿಸಲಾಗಿದೆ.

ಜ್ಞಾನೇಶ್ ಕುಮಾರ್ ಅವರು 1988 ರ ಬ್ಯಾಚ್ ಕೇರಳ ಕೇಡರ್ ಐಎಎಸ್ ಅಧಿಕಾರಿ ಕಳೆದ ವರ್ಷ ಮಾರ್ಚ್ ನಿಂದ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ವಿಧಾನಸಭೆ ಚುನಾವಣೆ ಮತ್ತು ಮುಂದಿನ ವರ್ಷ ನಡೆಯಲಿರುವ ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ತಮಿಳುನಾಡು ಚುನಾವಣೆಗಳ ಮೇಲ್ವಿಚಾರಣೆ ಮಾಡಲಿದ್ದಾರೆ.

ಫೆ. 17ರಂದು ಸಭೆ ಸೇರಿದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನೊಳಗೊಂಡ ಆಯ್ಕೆ ಸಮಿತಿಯು ಜ್ಞಾನೇಶ್ ಕುಮಾರ್ ಅವರ ಹೆಸರನ್ನು ಅಂತಿಮಗೊಳಿಸಿ ರಾಷ್ಟ್ರಪತಿಗೆ ಶಿಫಾರಸು ಮಾಡಿತು.

Comments are closed.