Current : ಕೃಷಿಗೆ 7 ಗಂಟೆ ವಿದ್ಯುತ್ ಪೂರೈಸಲು ಸರ್ಕಾರ ಆದೇಶ!!

Current : ದೇಶದ ಬೆನ್ನೆಲುಬು ರೈತರು. ಆದರೆ ಇದು ಹೇಳಿಕೆಯಾಗಿ ಉಳಿದುಕೊಂಡು ಬರುತ್ತಿದೆ. ಯಾಕೆಂದರೆ ಸರ್ಕಾರ ರೈತರಿಗೆ ಯಾವುದೇ ರೀತಿಯ ವಿಶೇಷವಾದ ಸವಲತ್ತುಗಳನ್ನು ಸರಿಯಾಗಿ ನೀಡುತ್ತಿಲ್ಲ. ನೀಡಿದರು ಅದೆಲ್ಲವೂ ಬಾಯಿ ಮಾತಿಗಾಗಿ ಉಳಿದುಕೊಳ್ಳುತ್ತಿದೆ. ಅದರಲ್ಲಿ ವಿದ್ಯುತ್ ಪೂರೈಕೆ ಕೂಡ ಒಂದಾಗಿತ್ತು. ಆದರೆ ಈಗ ರಾಜ್ಯ ಸರ್ಕಾರವು ಎಚ್ಚೆತ್ತುಕೊಂಡಿದ್ದು ರೈತರ ಕೃಷಿ ಕೆಲಸಗಳಿಗೆ 7:00 ವಿದ್ಯುತ್ ಪೂರೈಸಲು ಆದೇಶ ನೀಡಿದೆ.
ಹೌದು, ಕೃಷಿ ಪಂಪ್ ಸೆಟ್ ಗಳಿಗೆ ದಿನದ 7 ತಾಸು ತ್ರಿ ಫೇಸ್ ಹಾಗೂ ಗೃಹ ಬಳಕೆ ಮತ್ತು ಕೈಗಾರಿಕೆಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸುವುದು ಸರ್ಕಾರದ ನೀತಿಯಾಗಿದ್ದು, ಇದಕ್ಕೆ ಬದ್ದವಾಗಿ ವಿದ್ಯುತ್ ನೀಡಲಾಗುತ್ತಿದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಅಲ್ಲದೆ ರಾಜ್ಯದಲ್ಲಿ ಈ ವರ್ಷ ವಿದ್ಯುತ್ ಕೊರತೆ ಇಲ್ಲ. ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕೆಲವು ಪ್ರದೇಗಳಲ್ಲಿ ನಿರ್ವಹಣಾ ಕಾರ್ಯಗಳಿಗಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆಯೇ ಹೊರತು ಲೋಡ್ ಶೆಡ್ಡಿಂಗ್ ಇಲ್ಲ. ಸರ್ಕಾರದ ಬದ್ದತೆಯಂತೆ ಸಮರ್ಪಕ ವಿದ್ಯುತ್ ಪೂರೈಕೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದಿದ್ದಾರೆ.
Comments are closed.