ಮಾ.1 ಪುತ್ತೂರು ಬಂಟರ ಭವನದಲ್ಲಿ ಡಾ.ಎಂ.ಎನ್.ಆರ್ , ಶಶಿ ಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಅಭಿವಂದನಾ ಕಾರ್ಯಕ್ರಮ

ಸುಳ್ಯ:ನ್ಯಾಷನಲ್ ಪ್ರೆಸ್‌ ಕೌನ್ಸಿಲ್‌ ಆಫ್‌ ಇಂಡಿಯಾ ಎಸ್‌ಸಿಆ‌ರ್ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಸಹಕಾರ ರತ್ನ ಡಾ. ಎಂ ಎನ್.ರಾಜೇಂದ್ರ ಕುಮಾರ್ ಅವರಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ಗೆ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಶಶಿಕುಮಾರ್‌ ರೈ ಬಾಲ್ಯೊಟ್ಟು ಅವರಿಗೆ ಪುತ್ತೂರು ಉಪ ವಿಭಾಗದ ಸಹಕಾರಿಗಳ ವತಿಯಿಂದ ಅಭಿವಂದನಾ ಕಾರ್ಯಕ್ರಮ ಮಾ.1ರಂದು ಪುತ್ತೂರಿನ ಎನ್. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಸುಳ್ಯದ ಸಿಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.

ಅಭಿವಂದನಾ ಸಮಿತಿಯ ಅಧ್ಯಕ್ಷರಾದ ಎಸ್. ಬಿ.ಜಯರಾಮ ರೈ ಹಾಗೂ ಸಮಿತಿಯ ಸಂಚಾಲಕರು ಹಾಗೂ ಡಿಸಿಸಿ ಬ್ಯಾಂಕ್‌ ನಿರ್ದೇಶಕರಾದ ಎಸ್‌.ಎನ್‌. ಮನ್ಮಥ ಅವರು ಆಮಂತ್ರಣಪತ್ರವನ್ನು ಬಿಡುಗಡೆ ಮಾಡಿದರು.

ಸುಳ್ಯ ಪುತ್ತೂರು ಬೆಳ್ತಂಗಡಿ ಹಾಗೂ ಕಡಬ ತಾಲೂಕನ್ನು ಒಳಗೊಂಡ ಪುತ್ತೂರು ಉಪ ವಿಭಾಗದ ಸಹಕಾರಿ ಬಂಧುಗಳ ವತಿಯಿಂದ ಕಾರ್ಯಕ್ರಮ ನಡೆಯಲಿದ್ದು ಸುಮಾರು 2,000ಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ ಎಂದು ಎಸ್‌.ಬಿ.ಜಯರಾಮ ರೈ ತಿಳಿಸಿದ್ದಾರೆ.

ಅಭಿವಂದನಾ ಸಮಿತಿಯ ಸುಳ್ಯ ತಾಲೂಕು ಸಂಚಾಲಕರಾದ ಸಂತೋಷ್‌ ಕುತ್ತಮೊಟ್ಟೆ, ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ವಿಷ್ಣು ಭಟ್ ಮೂಲೆತೋಟ, ಡಿಸಿಸಿ ಬ್ಯಾಂಕ್‌ ಸುಳ್ಯ ಶಾಖೆಯ ವ್ಯವಸ್ಥಾಪಕರಾದ ಚಂದ್ರಪ್ರಕಾಶ್, ಸುಳ್ಯ ಸಿಎ ಬ್ಯಾಂಕ್ ಅಧ್ಯಕ್ಷ ವಿಕ್ರಂ ಅಡ್ವಂಗಾಯ, ಮುರುಳ್ಯ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾದ ವಸಂತ ನಡುಬೈಲು, ಸುಳ್ಯ ಸಿಎ ಬ್ಯಾಂಕ್‌ ಕಾರ್ಯನಿರ್ವಹಣಾಧಿಕಾರಿ ಸುದರ್ಶನ ಎಸ್.ಪಿ, ಸಂಪಾಜೆ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ ಕುಮಾ‌ರ್, ಮಂಡೆಕೋಲು ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಉದಯಕುಮಾ‌ರ್, ಕನಕಮಜಲು ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಮತ್ತಿತರರು ಉಪಸ್ಥಿತರಿದ್ದರು.

Comments are closed.