Chikkamagaluru: ಬೇಟೆಗಾರರು ಹಾಕಿದ್ದ ಉರುಳಿಗೆ ಬಿದ್ದು ಚಿರತೆ ಸಾವು

Share the Article

Chikkamagaluru: ಬೇಟೆಗಾರರು ಕಾಫಿ ತೋಟದಲ್ಲಿ ಹಾಕಿದ್ದ ಉರುಳಿಗೆ ಚಿರತೆಯೊಂದು ಸಿಕ್ಕಿಬಿದ್ದು ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಸಮೀಪ ನಡೆದಿದೆ.

ಫೆ.20ರ ಗುರುವಾರ ರಾತ್ರಿ ಚಿರತೆ ಉರುಳಿಗೆ ಸಿಕ್ಕಿಬಿದ್ದಿದ್ದು, ಬೆಳಗ್ಗೆ ಇದನ್ನು ಸ್ಥಳೀಯರು ಗಮನಿಸಿದ್ದಾರೆ. ನಂತರ ಅರಣ್ಯ ಇಲಾಖೆಗೆ ಸುದ್ದಿಯನ್ನು ಮುಟ್ಟಿಸಿದ್ದಾರೆ. ಚಿರತೆಯನ್ನು ರಕ್ಷಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಶಿವಮೊಗ್ಗದಿಂದ ಅರಿವಳಿಕೆ ತಜ್ಞರನ್ನು

ಕರೆಯಲು ಮುಂದಾಗಿದ್ದರು. ಆದರೂ ಅಷ್ಟರಲ್ಲಿ ಚಿರತೆ ಸಾವಿಗೀಡಾಗಿದೆ ಎಂದು ಅಧಿಕಾರಿಗಳು ಹೇಳಿದರು. ಉರುಳು ಬಿಡಿಸುವ ಪ್ರಯತ್ನದಲ್ಲಿ ಸೊಂಟಕ್ಕೆ ಮತ್ತಷ್ಟು ಬಿಗಿಯಾಗಿ ಸಾವಿಗೀಡಾಗಿದೆ ಎಂದು ಅಧಿಕಾರಿಗಳು ಹೇಳಿದರು.

ಕಾಫಿ ತೋಟದ ಮಾಲೀಕರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗುವುದು. ಮರಣೋತ್ತರ ಪರೀಕ್ಷೆ ಬಳಿಕ ತನಿಖೆ ನಡೆಯಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Comments are closed.