Kumbh Mela : ಕುಂಭಮೇಳದಿಂದ ಉ. ಪ್ರ ಕ್ಕೆ ಹರಿದು ಬಂತು ರಾಶಿ ರಾಶಿ ದುಡ್ಡು – ಲೆಕ್ಕ ಬಿಚ್ಚಿಟ್ಟ ಸಿಎಂ ಯೋಗಿ!!

Kumbh Mela : ವಿಶ್ವದ ಅತಿ ದೊಡ್ಡ ಧಾರ್ಮಿಕ ಉತ್ಸವ 144 ವರ್ಷಕ್ಕೊಮ್ಮೆ ಸಂಭವಿಸುವ ಮಹಾಕುಂಭ ಮೇಳಕ್ಕೆ ಸಾಕ್ಷಿಯಾದ ಪ್ರಯಾಗ್​ರಾಜ್​ಗೆ ದೇಶ-ವಿದೇಶಗಳಿಂದ ಕೋಟ್ಯಂತರ ಭಕ್ತಾಧಿಗಳು ಆಗಮಿಸಿ, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಜನವರಿ 13ರಿಂದ ಶುರುವಾದ ಮಹಾಕುಂಭ ಇದೇ ಫೆ.26ರಂದು ಅಂತ್ಯವಾಗಲಿದೆ. ಈ ನಡುವೆ ಈ ಮಹಾಕುಂಭವೂ ಉತ್ತರ ಪ್ರದೇಶ ಸರ್ಕಾರಕ್ಕೆ ರಾಶಿ ರಾಶಿ ದುಡ್ಡು ಹರಿಯುವಂತೆ ಮಾಡಿದೆ. ಈ ಕುರಿತಾಗಿ ಸ್ವತಹ ಯೋಗೀ ಆದಿತ್ಯನಾಥ ಅವರೇ ಲೆಕ್ಕ ನೀಡಿದ್ದಾರೆ.

ಹೌದು, ಮಹಾಕುಂಭ ಮೇಳ ಉತ್ತರಪ್ರದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆ ನೀಡಿದೆ. ಒಂದಲ್ಲ..ಎರಡಲ್ಲ.. ಬರೋಬ್ಬರಿ 3 ಲಕ್ಷ ಕೋಟಿ ರೂ.ಗಿಂತ ಹೆಚ್ಚಿನ ಹಣ ರಾಜ್ಯದ ಖಜಾನೆಗೆ ಹರಿದು ಬರಲಿದೆ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಉತ್ತರಪ್ರದೇಶದ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಯೋಗಿ ಮಹಾಕುಂಭದಿಂದ ರಾಜ್ಯದ ಆರ್ಥಿಕತೆಯಲ್ಲಿ 3 ಲಕ್ಷ ಕೋಟಿ ರೂ.ಗೂ ಹೆಚ್ಚು ಬೆಳವಣಿಗೆಯನ್ನು ತರಲಿದೆ ಎಂದು ಹೇಳಿದ್ದಾರೆ.

Comments are closed.