Bengaluru: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಹಿನ್ನಲೆ: ಉಡುಪಿ, ದ.ಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Share the Article

Bengaluru: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕದ ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದ‌ರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ, ಬೆಂಗಳೂರು (Bengaluru) ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

Comments are closed.