HSRP:HSRP ನಂಬರ್ ಅಳವಡಿಕೆಗೆ ಮತ್ತೆ ಅವಧಿ ವಿಸ್ತರಣೆ! ಕೊನೆ ದಿನ ನಿಗದಿಗೊಳಿಸಿದ ರಾಜ್ಯ ಸರ್ಕಾರ!

HSRP: ರಾಜ್ಯ ಸರ್ಕಾರದಿಂದ ವಾಹನ ಮಾಲೀಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯ ಗಡುವನ್ನು ಮತ್ತೆ ವಿಸ್ತರಣೆ ಮಾಡಿದೆ.
ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ (HSRP) ಅಳವಡಿಕೆಯ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 01-04-2019ಕ್ಕಿಂತ ಪೂರ್ವದಲ್ಲಿ ನೋಂದಣಿಯಾಗಿರುವ ಎಲ್ಲಾ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ಸರ್ಕಾರ ದಿನಾಂಕ 17-08-2023ರಲ್ಲಿ ಅಧಿಸೂಚನೆ ಹೊರಡಿಸಿತ್ತು.
ಆದರೆ ಇನ್ನೂ ಅನೇಕ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಲ್ಲ. ಈ ಹಿನ್ನಲೆಯಲ್ಲಿ ದಿನಾಂಕ 31-03-2025ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಉಳಿದಂತೆ ದಿನಾಂಕ 17-08-2023ರಲ್ಲಿ ಹೊರಡಿಸಿದಂತ ಆದೇಶದಲ್ಲಿ ಬೇರೆ ಯಾವುದೇ ಬದಲಾವಣೆ ಇರುವುದಿಲ್ಲ ಅಂತ ತಿಳಿಸಿದೆ.
Comments are closed.