Crime: ಭದ್ರತಾ ಪಡೆಗಳಿಗೆ ಬೆದರಿಕೆಯೊಡ್ಡಿದ್ದ ಉಗ್ರರ ಬಂಧನ!

Share the Article

Crime: ಭದ್ರತಾ ಪಡೆಗಳಿಗೆ ಬೆದರಿಕೆಯೊಡ್ಡಿದ್ದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಬೆದರಿಕೆಯೊಡ್ಡಿದ್ದ ಮಣಿಪುರದ ನಿಷೇಧಿತ ಸಂಘಟನೆ ಕಾಂಗ್ರೆಪಾಕ್ ಕಮ್ಯುನಿಸ್ಟ್ ಪಕ್ಷದ (ಸಿಟಿ ಮೈಟೈ) ಇಬ್ಬರು ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ.

 

ವಾಂಗೈಮ್ ರೋಹಿತ್ ಸಿಂಗ್ (18) ಮತ್ತು ತಂಗ್ಟಮ್ ನೊಂಗನ್ ಮೀಟೈ (18) ಬಂಧಿತ ಆರೋಪಿಗಳು. ಆರೋಪಿಗಳು ಹಣ ಸುಲಿಗೆಯಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

 

ಬಿಷ್ಣುಪುರ ಮತ್ತು ಪೂರ್ವ ಇಂಫಾಲ್ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ. ಭದ್ರತಾ ಪಡೆಗಳು ನಡೆಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ ಮಣಿಪುರದ ನಿಷೇಧಿತ ಯುನೈಟೆಡ್ ನ್ಯಾಷನಲ್ ಲಿಬರೇಶನ್ ಫ್ರಂಟ್‌ನ (ಕೆ) ಇಬ್ಬರು ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಫೆ. 23 ರಂದು ಮಾಹಿತಿ ನೀಡಿದ್ದಾರೆ.

Comments are closed.