Mangaluru: ಮಹಾ ಕುಂಭಮೇಳದಲ್ಲಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಪುಣ್ಯಸ್ನಾನ

Share the Article

Mangaluru: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ, ದಕ್ಷಿಣ ಕನ್ನಡ (Mangaluru) ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಭಾನುವಾರ ಮುಂಜಾನೆ ತೀರ್ಥಸ್ನಾನ ಮಾಡಿದ್ದಾರೆ.

ಈ ಐತಿಹಾಸಿಕ ಮಹಾಕುಂಭಮೇಳದಲ್ಲಿ ಪಾಲ್ಗೊಂಡ ಸಂಸದರು, ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ವಿಶೇಷ ಪೂಜೆ ನೆರವೇರಿಸಿ ದಕ್ಷಿಣ ಕನ್ನಡ ಜಿಲ್ಲೆಯ ಹಾಗೂ ನಾಡಿನ ಜನತೆಯ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಜೊತೆಗೆ “ಪ್ರಯಾಗ್‌ರಾಜ್‌ನ ಈ ಮಹಾ ಕುಂಭದಲ್ಲಿ ಪಾಲ್ಗೊಳ್ಳಲು ನಿಜಕ್ಕೂ ಖುಷಿ ತಂದಿದೆ. ಇದು ಅದ್ಬುತ ಅನುಭವ ಎಂದು ಕ್ಯಾ. ಚೌಟ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Comments are closed.