Mangaluru : ಮಂಗಳಮುಖಿಯರಂತೆ ವೇಷತೊಟ್ಟು ಭಿಕ್ಷಾಟನೆ – ಕ್ರಮಕ್ಕೆ ಜಿ. ಪಂ ಸಿಇಓ ಆಗ್ರಹ!!

Share the Article

Mangaluru : ಮಂಗಳೂರಿನಲ್ಲಿ ಅನ್ಯ ರಾಜ್ಯದ ಮಹಿಳೆಯರು ಮಂಗಳಮುಖಿಯರಂತೆ ವೇಷ ಧರಿಸಿ ಬಿಕ್ಷಾಟನೆ ಮತ್ತು ವೇಶ್ಯಾವಾಟಿಕೆ ನಡೆಸುತ್ತಿರುವ ಚಟುವಟಿಕೆಗಳು ಬೆಳಕಿಗೆ ಬಂದಿವೆ. ಹೀಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಜಿಲ್ಲಾ ಪಂಚಾಯಿತಿ ಸಿಇಒ ಅವರು ಸೂಚಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನಲ್ಲಿ ಸೋಮವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಜಿಲ್ಲಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಕಲಿ ತೃತೀಯಲಿಂಗಿಗಳ ಹಾವಳಿ ಹೆಚ್ಚಾಗಿದೆ. ಹೀಗಾಗಿ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು. ತೃತೀಯಲಿಂಗಿಗಳಿಗೆ ಗುರುತು ಚೀಟಿಗಳಿಗೆ ನೋಂದಾಯಿಸಲು ವ್ಯಕ್ತಿಗಳ ಪರಿಶೀಲಿಸಿ ಗುರುತು ಚೀಟಿ ನೀಡಬೇಕು. ಬ್ಯಾಂಕ್‌ ಪಾಸ್‌ಬುಕ್‌, ಪಡಿತರ ಚೀಟಿ, ವೋಟರ್‌ ಐಡಿ, ಆಧಾರ್‌ ಕಾರ್ಡ್‌, ವಿಮೆ ಯೋಜನೆ ಗಳನ್ನು ಒದಗಿಸಬೇಕು. ಪ್ರಧಾನಮಂತ್ರಿ ಆವಾಸ್‌ ಯೋಜನೆ ಯಡಿ ನಿವೇಶನ ನೀಡಬೇಕು ಎಂದು ಹೇಳಿದ್ದಾರೆ.

Comments are closed.