Madikeri: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಕೊಡಗು ಜಿಲ್ಲಾ ಪ್ರವಾಸ

Madikeri: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಇಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮಾನ್ಯ ಸಚಿವರು ಫೆಬ್ರವರಿ, 25 ರಂದು(ಇಂದು) ಮಧ್ಯಾಹ್ನ 12 ಗಂಟೆಗೆ ಕುಶಾಲನಗರ ರೈತ ಸಹಕಾರ ಭವನದಲ್ಲಿ ಕನ್ನಡ ಸಿರಿ ಸ್ನೇಹ ಬಳಗ ವತಿಯಿಂದ ನಡೆಯುವ ಕರ್ನಾಟಕ ಸುವರ್ಣ ಸಂಭ್ರಮಾಚರಣೆ ಅಂಗವಾಗಿ 50ನೇ ಕಾರ್ಯಕ್ರಮ ‘ಕುಶಲೋತ್ಸವ’ದಲ್ಲಿ ಭಾಗಿ ಹಾಗೂ ಕುಶಲಸಿರಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಕೆ.ಎ.ಹಿದಾಯುತ್ತುಲ್ಲ ಅವರು ತಿಳಿಸಿದ್ದಾರೆ.
Comments are closed.