Mangaluru: ಕೋಟೆಕಾರು ದರೋಡೆ ಪ್ರಕರಣ; ಸ್ಥಳೀಯರಿಬ್ಬರ ಬಂಧನ

Mangaluru: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ದರೋಡೆ ಪ್ರಕರಣದಲ್ಲಿ ಕೇಳಿ ಬಂದಿದ್ದ ಸ್ಥಳೀಯರಿಬ್ಬರು ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ಶಶಿ ತೇವರ್ ಎನ್ನುವ ಹೆಸರಿನಲ್ಲಿ ಮುಂಬೈನಲ್ಲಿದ್ದುಕೊಂಡು ಪೊಲೀಸರಿಗೆ ಮೋಸ ಮಾಡುತ್ತಿದ್ದ ಭಾಸ್ಕರ್ ಬೆಳ್ಚಪಾಡ (69) ಮತ್ತು ಕೆ.ಸಿ.ರೋಡ್ ನಿವಾಸಿ ಮಹಮ್ಮದ್ ನಜೀರ್ ಎಂಬಿಬ್ಬರನ್ನು ಬಂಧನ ಮಾಡಲಾಗಿದೆ.

ಸ್ಥಳೀಯರ ಕೈವಾಡವಿಲ್ಲದೆ ಈ ಕೃತ್ಯ ನಡೆಸಲು ಸಾಧ್ಯವಿಲ್ಲ ಎನ್ನುವ ಮಾತು ಕೇಳಿ ಬಂದಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಮುರುಗನ್ ಡಿ ದೇವರ್ ಮತ್ತು ಮಣಿ ಕಣ್ಣನ್ ಮೇಲೆ ಗುಂಡು ಹಾರಿಸಿ ನೆರವು ನೀಡಿದ್ದ ಸ್ಥಳೀಯ ವ್ಯಕ್ತಿ ಯಾರು ಎನ್ನುವಂತೆ ಕೇಳಲಾಗಿತ್ತು. ಅನಂತರ ತಿಳಿದು ಬಂದಿತ್ತು ಶಶಿ ತೇವರ್ ಎನ್ನುವ ಧಾರಾವಿ ಮೂಲದ ವ್ಯಕ್ತಿ ಕೋಟೆಕಾರು ಬ್ಯಾಂಕ್ ಕುರಿತು ಮಾಹಿತಿ ನೀಡಿದ್ದ ಎನ್ನಲಾಗಿದೆ.
ಶಶಿ ತೇವರ್ ಎನ್ನುವ ಹೆಸರಿನಲ್ಲಿ ಗುರುತಿಸಿಕೊಂಡಿದ್ದ ಭಾಸ್ಕರ ಬೆಳ್ಚಪ್ಪಾಡ ಎಂಬಾತನನ್ನು ಬೆಂಗಳೂರಿನ ರೈಲು ನಿಲ್ದಾಣದಲ್ಲಿ ಬಂಧನ ಮಾಡಲಾಗಿದ್ದು, ವಿಚಾರಣೆ ಮಾಡಿದಾಗ ಕಳೆದ ಏಳು ವರ್ಷಗಳಿಂದ ಕೆಸಿ ರೋಡ್ ನಿವಾಸಿ ಮಹಮ್ಮದ್ ನಜೀರ್ ಜೊತೆಗೆ ಸಂಪರ್ಕದಲ್ಲಿರುವುದು ಮತ್ತು ಕೋಟೆಕಾರು ಬ್ಯಾಂಕ್ ದರೋಡೆಗೆ ಇತರ ಆರೋಪಿಗಳೊಂದಿಗೆ ಸೇರಿ ಸಂಚು ಮಾಡಿರುವುದನ್ನು ಹೇಳಿದ್ದಾನೆ.
ವಿಟ್ಲ ಸಮೀಪದ ಕನ್ಯಾನ ನಿವಾಸಿಯಾಗಿರುವ ಭಾಸ್ಕರ ಬೆಳ್ಚಪ್ಪಾಡ 25 ವರ್ಷಗಳಿಂದ ಊರು ಬಿಟ್ಟು ಮುಂಬೈ, ದೆಹಲಿ, ಬೆಂಗಳೂರಿನಲ್ಲಿ ವಾಸವಿದ್ದ. ಈತ ಮುಂಬೈ, ದೆಹಲಿಯಲ್ಲಿ ಬೇರೆ ಬೇರೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಕಂಡು ಬಂದಿದೆ.
ಈತನ ಮೇಲೆ 2011 ರಲ್ಲಿ ದರೋಡೆ ಯತ್ನ, 2021 ರಲ್ಲಿ ಮುಂಬೈ ಕ್ರೈಂ ಬ್ರಾಂಚ್ ಸಿಐಡಿ ಠಾಣೆ ವ್ಯಾಪ್ತಿಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ, 2022 ರಲ್ಲಿ ಕೋಣಾಜೆ ಠಾಣೆಯಲ್ಲಿ ಸುಲಿಗೆ ಪ್ರಕರಣ, 2022 ರಲ್ಲಿ ಉಳ್ಳಾಲದಲ್ಲಿ ದರೋಡೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ.
ಈಗಾಗಲೇ ಮಂಗಳೂರು ಪೊಲೀಸರು ಕೋಟೆಕಾರು ಬ್ಯಾಂಕ್ ದರೋಡೆ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಗಳಲ್ಲಿ ಮುರುಗನ್ ಡಿ. ದೇವರ್, ಯೋಶುವಾ ರಾಜೇಂದ್ರನ್, ಕಣ್ಣನ್ ಮಣಿ ಮತ್ತು ಚಿನ್ನಾಭರಣ ಅಡಗಿಸಿಡಲು ಸಹಕರಿಸಿದ್ದ ಷಣ್ಮುಗಂ ಸುಂದರಂನನ್ನು ಬಂಧನ ಮಾಡಿದ್ದಾರೆ. ಆರೋಪಿಗಳಿಂದ 18.314 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ. 3,80,500 ಹಣ ವಶಪಡಿಸಲಾಗಿದೆ.
Comments are closed.