High School Teachers: ಪ್ರೌಢಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ – ಬಡ್ತಿ ವಿಚಾರವಾಗಿ ನಾಳೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸಭೆ!!

Share the Article

High School Teachers: ರಾಜ್ಯ ಸರ್ಕಾರವು ಪ್ರೌಢಶಾಲಾ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್ ಒಂದನ್ನು ನೀಡಿದ್ದು ಬಡ್ತಿ ನೀಡುವ ವಿಚಾರವಾಗಿ ನಾಳೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸಭೆ ಕರೆಯಲಾಗಿದೆ.

 

ಹೌದು, ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ನಾಳೆ ಮಹತ್ವದ ಸಭೆ ನಿಗದಿ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಸಭೆಯಲ್ಲಿ ಪ್ರೌಢಶಾಲಾ ಶಿಕ್ಷಕರ ಜೇಷ್ಠತಾ ಪಟ್ಟಿ ತಯಾರಿಸಲು ನಿರ್ಧರಿಸಲಾಗಿದೆ. ಈ ಮೂಲಕ ಬಡ್ತಿಯನ್ನು ಎದುರು ನೋಡುತ್ತಿದ್ದ ಪ್ರೌಢಶಾಲಾ ಶಿಕ್ಷಕರಿಗೆ ಸಂತಸ ತಂದಿದೆ.

 

ಅಂದಹಾಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ದಿನಾಂಕ:28/02/2025ರ ಪೂರ್ವಾಹ್ನ 11.00 ಗಂಟೆಗೆ ಕೊಠಡಿ ಸಂಖ್ಯೆ:649, ಸಭಾಂಗಣ, 6ನೇ ಮಹಡಿ, ಶಾಲಾ ಶಿಕ್ಷಣ ಇಲಾಖೆ, ಇಲ್ಲಿ ಸಭೆಯನ್ನು ಏರ್ಪಡಿಸಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ವಿವಿಧ ಘಟಕಗಳಲ್ಲಿನ ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಪ್ರೌಢಶಾಲಾ ಶಿಕ್ಷಕರುಗಳ ರಾಜ್ಯ ಮಟ್ಟದ ಒಂದೇ ಕ್ರೋಢಿಕೃತ ಜೇಷ್ಠತಾ ಪಟ್ಟಿಯನ್ನು ತಯಾರಿಸುವುದು ಈ ಸಭೆಯ ಮುಖ್ಯ ಉದ್ದೇಶವಾಗಿದೆ.

Comments are closed.