Recruitment : 9,000 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸರ್ಕಾರ ಆದೇಶ!!

Share the Article

Recruitment : ಉದ್ಯೋಗ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು ಬರೋಬ್ಬರಿ 9,000 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ.

ಹೌದು, ಸಾರಿಗೆ ಇಲಾಖೆಯಲ್ಲಿ ಬರೋಬ್ಬರಿ 9 ಸಾವಿರ ವಿವಿಧ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಾಗಿ ಸ್ವತಹ ಸಿಎಂ ಸಿದ್ದರಾಮಯ್ಯ ಅವರೇ ಎಕ್ಸ್ ಪೋಸ್ಟ್ ಮುಖಾಂತರ ಮಾಹಿತಿ ಹಂಚಿಕೊಂಡಿದ್ದಾರೆ.

ಪೋಸ್ಟ್ ನಲ್ಲಿ ಏನಿದೆ?

ಶಕ್ತಿ ಯೋಜನೆ ಜಾರಿಯ ನಂತರದಿಂದ ಸರ್ಕಾರಿ ಬಸ್‌ಗಳು ಪ್ರಯಾಣಿಕರಿಂದ ತುಂಬಿಹೋಗಿವೆ. ಮಹಿಳೆಯರು ಉದ್ಯೋಗ, ಶಿಕ್ಷಣ ಹಾಗೂ ಪ್ರವಾಸ ಮುಂತಾದ ಕಾರಣಗಳಿಗಾಗಿ ಉಚಿತ ಪ್ರಯಾಣದ ಸೌಲಭ್ಯ ಪಡೆದು ಸಂಚಾರ ನಡೆಸುತ್ತಿದ್ದು, ನಿಜಾರ್ಥದಲ್ಲಿ ಶಕ್ತಿ ನಾಡಿನ ಸಾರಿಗೆ ವ್ಯವಸ್ಥೆಗೆ ಶಕ್ತಿ ತುಂಬಿದೆ. ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿರುವ ಹಿನ್ನೆಲೆ ಹೆಚ್ಚುವರಿ ಬಸ್‌ಗಳನ್ನು ಖರೀದಿಸಲಾಗಿದೆ. ಈ ಮೂಲಕ ಉದ್ಯೋಗ ಸೃಷ್ಟಿಯು ಹೆಚ್ಚಾಗಿದೆ. ಈಗಾಗಲೇ ಸಾರಿಗೆ ಸಂಸ್ಥೆಗಳಲ್ಲಿನ 9,000 ಹುದ್ದೆಗಳ ನೇಮಕಾತಿಗೆ ಅನುಮತಿ ನೀಡುವುದರ ಜೊತೆಗೆ 2,000 ಚಾಲಕ ಕಂ ನಿರ್ವಾಹಕರು ಹಾಗೂ 300 ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಆದೇಶಿಸಲಾಗಿದೆ.

Comments are closed.