of your HTML document.

Belthangady : ಚಾರ್ಮಾಡಿ ಘಾಟ್ ತಿರುವಿನಲ್ಲಿ KSRTC ಬಸ್ ಸ್ಟೇರಿಂಗ್ ಕಟ್ – ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ದೊಡ್ಡ ಅನಾಹುತ

Belthangady : ಚಾರ್ಮಾಡಿ ಘಾಟಿನಲ್ಲಿ ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನ ಸ್ಟೇರಿಂಗ್ ಕಟ್ಟಾಗಿದ್ದು ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ಒಂದು ತಪ್ಪಿದೆ.

 

ಹೌದು, ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನ ಸ್ಟೇರಿಂಗ್ ಏಕಾಏಕಿ ಕಟ್ ಆಗಿದ್ದು, ಕೂಡಲೇ ಚಾಲಕ ಸಮಯ ಪ್ರಜ್ಞೆ ಮೆರೆದು ರಸ್ತೆ ಬದಿಗೆ ಬಸ್ ನಿಲ್ಲಿಸಿದ್ದಾರೆ. ಹೀಗಾಗಿ ಚಾಲಕನ ಸಮಯ ಪ್ರಜ್ಞೆಯಿಂದ ಅದೃಷ್ಟವಶಾತ್ ಭಾರಿ ದುರಂತವೊಂದು ತಪ್ಪಿದೆ.

 

 ಈ ಘಟನೆಯ ಬಳಿಕ ಸಾರ್ವಜನಿಕರು ಹಾಗೂ ಪ್ರಯಾಣಿಕರು ಸಂಸ್ಥೆಯು ಬಸ್ ಗಳನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ, ಪರಿಶೀಲಿಸದೆ ರಸ್ತೆಗೆ ಬಿಡುತ್ತಿದ್ದಾರೆ ಎಂಬುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Comments are closed.