Mangalore: ಮಟಮಟ ಮಧ್ಯಾಹ್ನ ಬ್ಯಾಂಕ್‌ನಲ್ಲಿ ಅಗ್ನಿ ಅವಘಡ; ದಾಖಲೆಗಳು ಸುಟ್ಟು ಭಸ್ಮ

Share the Article

Mangalore: ಬಂಟ್ಸ್‌ ಹಾಸ್ಟೆಲ್‌ ಬಳಿಯ ಕರಂಗಲಪಾಡಿಯ ವಾಣಿಜ್ಯ ಕಟ್ಟಡವೊಂದರಲ್ಲಿರುವ ಬ್ಯಾಂಕ್‌ನಲ್ಲಿ ಫೆ.28 (ಇಂದು) ಶುಕ್ರವಾರ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.

ಬ್ಯಾಂಕಿನಲ್ಲಿ ಶಾರ್ಟ್‌ ಸರ್ಕಿಟ್‌ ಉಂಟಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಬರುತ್ತಿದೆ ಎನ್ನಲಾಗಿದೆ. ಬ್ಯಾಂಕ್‌ನಲ್ಲಿದ್ದ ದಾಖಲೆಗಳು ಬೆಂಕಿಗಾಹುತಿಯಾಗಿದೆ. ಬೆಂಕಿ ವ್ಯಾಪಿಸುತ್ತಿದ್ದಂತೆ ಸಿಬ್ಬಂದಿಗಳು ಹೊರಗೆ ಓಡಿ ಬಂದಿದ್ದು, ಮಧ್ಯಾಹ್ನವಾಗಿದ್ದರಿಂದ ಗ್ರಾಹಕರ ಸಂಖ್ಯೆ ಕಡಿಮೆ ಇತ್ತು ಎಂದು ವರದಿಯಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು ಕಾರ್ಯಾಚರಣೆ ಮಾಡುತ್ತಿದ್ದಾರೆ.

Comments are closed.