2nd PUC Exam: ರಾಜ್ಯದಲ್ಲಿ ‘ದ್ವಿತೀಯ PUC’ ಪರೀಕ್ಷೆ ಆರಂಭ – ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

2nd PUC Exma: ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ ಆರಂಭವಾಗಿದೆ.ಮಾರ್ಚ್ 01 ರಿಂದ 20 ರವರೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ನಡೆಯಲಿದೆ. ಈ ಬೆನ್ನಲ್ಲೇ ವಿದ್ಯಾರ್ಥಿಗಳು ಈ ನಿಯಮಗಳನ್ನು ಪಾಲಿಸುವುದು ಕಡ್ಡಾಯ ಎಂದು ಇಲಾಖೆ ತಿಳಿಸಿದೆ.

ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ
* ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು.
* ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾಟ್ ವಾಚ್ ಬಳಕೆ ನಿಷೇಧ
* ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ.
* ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.
* ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ.
* ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದುಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಜೊತೆಗೆ ಪರೀಕ್ಷಾ ಕೇಂದ್ರಗಳ ಸುತ್ತ ಅಗತ್ಯ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು. ಪೊಲೀಸ್ ರಕ್ಷಣೆಯಲ್ಲಿಯೇ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಬೇಕು. ಪ್ರಶ್ನೆಪತ್ರಿಕೆಗಳ ರಕ್ಷಣೆಗಾಗಿ ನೇಮಿಸಿರುವ ತಹಶೀಲ್ದಾರ್, ಬಿಇಒ ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರನ್ನು ಒಳಗೊಂಡ ವಿಶೇಷ ಪ್ರಶ್ನೆ ಪತ್ರಿಕಾ ಪಾಲಕರ ತ್ರಿಸದಸ್ಯ ಸಮಿತಿ ನಿಯಮಾನುಸಾರ ಕಾರ್ಯನಿರ್ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
Comments are closed.