Kollegal: ಟಿಪ್ಪರ್-ಕಾರು ನಡುವೆ ಭೀಕರ ಅಪಘಾತ; 5 ಸಾವು

Kollegal: ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿ ಟಿಪ್ಪರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮಂಡ್ಯ ಮೂಲದ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ ರಸ್ತೆ ಪಕ್ಕಕ್ಕೆ ಕಾರು ಉರುಳಿ ಬಿದ್ದಿದೆ. ಕಾರು ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟದ ಕಡೆಗೆ ಹೋಗುತ್ತಿತ್ತು. ಘಟನಾ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Comments are closed.