Parangipete : ಬಾಲಕ ದಿಗಂತ್ ನಾಪತ್ತೆ ಪ್ರಕರಣ – ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

Bantawala: ಫರಂಗಿಪೇಟೆಯ ಕಿದೆಬೆಟ್ಟು ಪದ್ಮನಾಭ ಮಡಿವಾಳರ ಪುತ್ರ ದಿಗಂತ್ ನಾಪತ್ತೆಯಾಗಿ ಐದು ದಿನಗಳಾಗಿವೆ. ಈವರೆಗೂ ಬಾಲಕನ ಸುಳಿವು ಪತ್ತೆಯಾಗದ ಹಿನ್ನೆಲೆಯಲ್ಲಿ , ಪೊಲೀಸ್ ಇಲಾಖೆ ಹಾಗೂ ಸರಕಾರದ ಯಾವುದೇ ರೀತಿಯ ಕಾರ್ಯಚರಣೆ ಯಶಸ್ವಿ ಕಾಣದೆ ಇರುವುದರಿಂದ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಫರಂಗಿಪೇಟೆ ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ನಾಪತ್ತೆಯಾದ ಬಾಲಕನನ್ನು ತಕ್ಷಣವೇ ಪೋಲೀಸರು ಪತ್ತೆ ಹಚ್ಚಬೇಕು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಹಿಂದೂ ಮುಖಂಡರು, ಬಿಜೆಪಿ ನಾಯಕರಿಗೆ ಭದ್ರತೆಯಿಲ್ಲದಂತಾಗಿದೆ ಎಂದ ಅವರು, ಫರಂಗಿಪೇಟೆ ಪರಿಸರದಲ್ಲಿ ಗಾಂಜಾ ಮಾಫಿಯಾ ಹೆಚ್ಚಾಗಿದೆ. ಈ ಹಿಂದೆಯೂ ಇಲ್ಲಿ ಬಿಜೆಪಿ ಮುಖಂಡನಿಗೆ ಮಾರಣಾಂತಿಕ ಹಲ್ಲೆಯಾಗಿತ್ತು ಎಂದು ಹೇಳಿದರು.
ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಮಾತನಾಡಿ, ವಿದ್ಯಾರ್ಥಿಯ ನಾಪತ್ತೆ ಪ್ರಕರಣವನ್ನು ಪೊಲೀಸರು ಆದಷ್ಟು ಬೇಗ ಪತ್ತೆಹಚ್ಚಬೇಕು. ಘಟನೆಯಾದ ತಕ್ಷಣವೇ ಬಾಲಕನ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಪೋಲೀಸರು ಆ ಸಮಯದಲ್ಲಿ ಕೊಂಚ ನಿರ್ಲಕ್ಷ್ಯ ಮಾಡಿದ್ದಾರೆ ಎಂದರು.
ಪ್ರತಿಭಟನಾ ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಭೇಟಿ ನೀಡಿದ್ದು, ಪ್ರಕರಣ ನಡೆದ ಸಮಯದಲ್ಲೇ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಆರಂಭದಲ್ಲಿ ಅವರು ನಿರ್ಲಕ್ಷ್ಯ ತೋರಿದ್ದಾರೆ. ನಾಪತ್ತೆಯಾದವನ ಮಾಹಿತಿ ಈ ವರೆಗೂ ಲಭ್ಯವಾಗಿಲ್ಲ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದೆಗೆಟ್ಟಿರುವುದೇ ಇದಕ್ಕೆ ಮುಖ್ಯ ಕಾರಣ. ಜಿಲ್ಲೆಯಾದ್ಯಂತ ಡ್ರಗ್ಸ್ ಪ್ರಕರಣಗಳು ಹೆಚ್ಚುತ್ತಿದ್ದು, ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವೇ ಇದಕ್ಕೆ ಕಾರಣ ಎಂದು ಅವರು ಕಿಡಿ ಕಾರಿದ್ದಾರೆ.
ಈಗ ಬಾಲಕ ನಾಪತ್ತೆಯಾಗಿ ಐದು ದಿನಗಳೇ ಕಳೆದಿದ್ದು, ಈವರೆಗೂ ಆತನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಇನ್ನೆರಡು ದಿನಗಳಲ್ಲಿ ದಿಗಂತ್ ಕುರಿತ ಮಾಹಿತಿ ದೊರೆಯದೇ ಹೋದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು. ಈ ಪ್ರತಿಭಟನೆಯ ಕಾವು ಜಿಲ್ಲೆಯಾದಂತ ಹಬ್ಬಲಿರುವ ಎಚ್ಚರಿಕೆಯನ್ನು ಸಹ ಹಿಂದೂ ಸಂಘಟನೆಗಳು ನೀಡಿವೆ.
Comments are closed.