Admission Rules : ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ಬಂತು ಹೊಸ ರೂಲ್ಸ್ – ಎದುರಾಯ್ತು ಲಕ್ಷಾಂತರ ಮಕ್ಕಳು ಮನೆಯಲ್ಲಿ ಉಳಿಯುವ ಆತಂಕ!!

Admission Rules: ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು ಕೇಂದ್ರ ಸರ್ಕಾರ ಹೊಸ ನಿಯಮವನ್ನು ಜಾರಿಗೊಳಿಸಿದ್ದು, ಇದರಿಂದಾಗಿ ಯುಕೆಜಿ ತೇರ್ಗಡೆ ಹೊಂದಲಿರುವ ಲಕ್ಷಾಂತರ ಮಂದಿ ಮಕ್ಕಳು ದಾಖಲಾತಿ ಪಡೆಯಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಒಂದನೇ ತರಗತಿಗೆ ಶಾಲೆಗೆ ದಾಖಲಾತಿ ಪಡೆಯಲು ಜೂನ್ 1 ಕ್ಕೆ 6 ವರ್ಷ ತುಂಬಿರಬೇಕು ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆಯು ಸುತ್ತೋಲೆ ಹೊರಡಿಸಿದೆ. ಹೌದು, ಕೇಂದ್ರ ಶಿಕ್ಷಣ ಇಲಾಖೆಯೂ 2025-26ರಿಂದಲೇ ಈ ಆದೇಶ ಜಾರಿಯಾಗಬೇಕೆಂದು ಎಲ್ಲಾ ರಾಜ್ಯಗಳಿಗೆ ಹೊರಡಿಸಲಾಗಿರುವ ಸುತ್ತೋಲೆಯಲ್ಲಿ ತಿಳಿಸಿದೆ. ರಾಜ್ಯ ಸರ್ಕಾರ ಈಗಾಗಲೇ 5.5 ವರ್ಷ ನಿಗದಿಗೊಳಿಸಲಾಗಿತ್ತು. ಇದರಿಂದ ಪೋಷಕರು ಹಾಗೂ ಶಾಲಾ ಸಿಬ್ಬಂದಿಯಲ್ಲಿ ಗೊಂದಲ ಉಂಟಾಗಿದೆ. ಈ ಕುರಿತಂತೆ ಸ್ಪಷ್ಟನೆ ನೀಡಬೇಕೆಂದು ಪತ್ರ ಬರೆಯಲು ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಈಗ ಪೋಷಕರ ನಿದ್ದೆಗೆಡಿಸಿದೆ. ಯಾಕೆಂದರೆ ಯುಕೆಜಿ ತೇರ್ಗಡೆ ಹೊಂದಲಿರುವ ಲಕ್ಷಾಂತರ ಮಂದಿ ಮಕ್ಕಳು ದಾಖಲಾತಿ ಪಡೆಯಲು ಆಗದ ಪರಿಸ್ಥಿತಿ ನಿರ್ಮಾಣವಾಗುವ ಭೀತಿ ಕಾಡುತ್ತಿದೆ.
ಇನ್ನು ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪ್ರಕರಣ ನ್ಯಾಯಾಲಯ ಹಂತದಲ್ಲಿದೆ. ಪೋಷಕರು ಹಾಗೂ ಮಕ್ಕಳ ಮನವಿ ಬಗ್ಗೆ ನನಗೂ ಸಹಾನುಭೂತಿ ಇದೆ. ಮುಂದಿನ ದಿನಗಳಲ್ಲಿ ಕೋರ್ಟ್ ನಿರ್ದೇಶನದ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
Comments are closed.