Bagalakote: ಪಿಯುಸಿ ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆ

Bagalakote: ಪಿಯುಸಿ ವಿದ್ಯಾರ್ಥಿನಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆದಿದೆ.
ತೇಜಸ್ವಿನಿ ಮೃತ ವಿದ್ಯಾರ್ಥಿನಿ. ಒಂದು ಮಾಹಿತಿ ಪ್ರಕಾರ, ಶಾರದಾ ಪಿಯು ಕಾಲೇಜಿನಲ್ಲಿ ಓದುತ್ತಿದ್ದ ಈಕೆ, ಪರೀಕ್ಷೆಯಲ್ಲಿ ಕಾಪಿ ಮಾಡಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿತ್ತು. ಇದಕ್ಕೆ ಪೋಷಕರನ್ನು ಶಾಲಾ ಆಡಳಿತ ಮಂಡಳಿ ಕರೆಸಿದ್ದು, ಬುದ್ಧಿವಾರ ಹೇಳಿದ್ದರು ಎನ್ನಲಾಗಿದೆ. ಇನ್ನೊಂದು ಮಾಹಿತಿ ಪ್ರಕಾರ, ವಿದ್ಯಾರ್ಥಿನಿ ತೇಜಸ್ವಿನಿ ಪರೀಕ್ಷೆಗೆ ಸಂಬಂಧಿಸಿದ ಫೈಲ್ ಒಂದನ್ನು ತನ್ನ ಬ್ಯಾಗ್‌ನಲ್ಲಿ ಇಟ್ಟುಕೊಳ್ಳುತ್ತಿದ್ದಳು ಎಂದು ಪ್ರಾಂಶುಪಾಲರು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ವಿದ್ಯಾರ್ಥಿನಿ ತನ್ನದೇನೂ ತಪ್ಪಿಲ್ಲ ಎಂದು ವಿದ್ಯಾರ್ಥಿನಿ ಪೋಷಕರ ಮುಂದೆ ಹೇಳಿದ್ದಳು. ಆದರೂ ಕಾಲೇಜಿಗೆ ಕರೆಸಿ ಬೈದಿದ್ದಾರೆ ಎಂದು ನೊಂದ ವಿದ್ಯಾರ್ಥಿನಿ ನೇರವಾಗಿ ಕಾಲೇಜಿನಿಂದ ಹೊರಬಂದವಳೇ ಕೆರೆಯತ್ತ ಸಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆರೆಯತ್ತ ಸಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು, ತನಿಖೆ ನಡೆಸಿದ್ದಾರೆ.
Comments are closed.